LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

​ಬೀದಿ ದೀಪಗಳಿಲ್ಲದೆ ಕತ್ತಲಲ್ಲಿ ಕಳೆಯುವ ಹಿರಿಯೂರು: ಶೀಘ್ರ ಕ್ರಮಕ್ಕೆ ಕೊಟ್ರೇಶ್ ಆಗ್ರಹ, ತಪ್ಪಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಮರ್ಪಕ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ತೀವ್ರ ಭಯದ ವಾತಾವರಣದಲ್ಲಿ ಸಂಚರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಬೀದಿ ದೀಪಗಳನ್ನು ಅಳವಡಿಸದಿದ್ದರೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಒಂದೇ ಮಾತರಂ ಜಾಗೃತಿ ವೇದಿಕೆಯ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಕೊಟ್ರೇಶ್ ಎಚ್ಚರಿಸಿದ್ದಾರೆ.

ಸರ್ವಿಸ್ ರಸ್ತೆಯಲ್ಲಿ ಕತ್ತಲೆಯ ಸಾಮ್ರಾಜ್ಯ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬಬ್ಬೂರು ಮಾರ್ಗದ ಸರ್ವಿಸ್ ರಸ್ತೆಯಲ್ಲಿ ವಿದ್ಯುತ್ ದೀಪಗಳಿಲ್ಲದೆ ರಾತ್ರಿ ವೇಳೆ ಸಂಚಾರ ಸಂಪೂರ್ಣ ದುಸ್ತರವಾಗಿದೆ. ಕತ್ತಲಿನ ಲಾಭ ಪಡೆದು ಅಪಘಾತಗಳು ಹಾಗೂ ಕಳ್ಳತನದಂತಹ ಕೃತ್ಯಗಳು ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಸಂಚರಿಸಲು ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ವಾಹನ ಸವಾರರು ಪ್ರತಿದಿನ ಅಂಜುತ್ತಲೇ ಕಾಲ ಕಳೆಯುವಂತಾಗಿದೆ.

news_1784597771_0_624.jpg

 

ಎಪಿಎಂಸಿ ಮತ್ತು ಆಸ್ಪತ್ರೆ ರಸ್ತೆಯಲ್ಲೂ ಅದೇ ಕಥೆ: ನಗರದ ಅಬಕಾರಿ ಇಲಾಖೆಯಿಂದ ಎಪಿಎಂಸಿ ಮಾರ್ಕೆಟ್‌ವರೆಗೆ ಹಾಗೂ ಸಾರ್ವಜನಿಕ ಆಸ್ಪತ್ರೆಯಿಂದ ಬಸ್ ನಿಲ್ದಾಣದವರೆಗಿನ ಮುಖ್ಯ ರಸ್ತೆಯಲ್ಲೂ ಬೀದಿ ದೀಪಗಳಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ಸಾರ್ವಜನಿಕರು, ವ್ಯಾಪಾರಸ್ಥರು, ಹಿರಿಯ ನಾಗರಿಕರು ಮತ್ತು ರೈತರು ಸಂಚರಿಸುತ್ತಾರೆ. ವಿಶೇಷವಾಗಿ ಎಪಿಎಂಸಿ ಮಾರುಕಟ್ಟೆಗೆ ಬೆಳಗಿನ ಜಾವ ಹಾಗೂ ರಾತ್ರಿ ವೇಳೆಯಲ್ಲಿ ಆಗಮಿಸುವ ರೈತರಿಗೆ ಮತ್ತು ವ್ಯಾಪಾರಿಗಳಿಗೆ ಕತ್ತಲೆಯಿಂದಾಗಿ ತೀವ್ರ ತೊಂದರೆಯಾಗುತ್ತಿದೆ.

ಅಧಿಕಾರಿಗಳಿಗೆ ಎಚ್ಚರಿಕೆ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಹಿರಿಯೂರು ನಗರಸಭೆ, ಬೆಸ್ಕಾಂ ಹಾಗೂ ಜಿಲ್ಲಾಡಳಿತ ಈ ಸಮಸ್ಯೆಯನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸಬೇಕು. ಅಬಕಾರಿ ಇಲಾಖೆಯಿಂದ ಎಪಿಎಂಸಿ ಮಾರ್ಕೆಟ್‌ವರೆಗಿನ ರಸ್ತೆಯಲ್ಲಿ ಹೊಸ ಎಲ್‌ಇಡಿ (LED) ಬೀದಿ ದೀಪಗಳನ್ನು ಶೀಘ್ರವಾಗಿ ಅಳವಡಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

​ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಒಂದೇ ಮಾತರಂ ಜಾಗೃತಿ ವೇದಿಕೆಯ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ಎಚ್ಚರಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್