Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಸೂಕ್ತ ಕ್ರಮದ ಭರವಸೆ ನೀಡಿದ ಗೃಹ ಸಚಿವ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಧ್ಯಮದವರ ಮೇಲೆ ಪೊಲೀಸ್ ದೌರ್ಜನ್ಯವಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಕೂಡಲೇ ನಿರ್ದೇಶನ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಶುಕ್ರವಾರ ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ, ಮೈಸೂರಿನಲ್ಲಿ ದಸರಾ ಸಂದರ್ಭದಲ್ಲಿ ಕರ್ತವ್ಯನಿರತ  ಪೋಟೋಗ್ರಾರ್ಸ್ಗಳ ಮೇಲೆ ಪೊಲೀಸರು ಮಾಡಿರುವ ದೌರ್ಜನ್ಯ ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಪತ್ರಕರ್ತರ ಮೇಲೆ ನಡೆದ ದೌರ್ಜನ್ಯದ ಘಟನೆಗಳನ್ನು ಗೃಹ ಸಚಿವರ ಗಮನಕ್ಕೆ ತಂದರು.

ಕರ್ತವ್ಯ ನಿರತ ಪತ್ರಕರ್ತರು, ಪೋಟೋಗ್ರಾರ್ಸ್, ವಿಡಿಯೋ ಜರ್ನಲಿಸ್ಟ್ಗಳ ಮೇಲೆ, ಆಗಿಂದಾಗ್ಗೆ ದೌರ್ಜನ್ಯ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಕೆಯುಡಬ್ಲೂಜೆ ಒತ್ತಾಯಿಸಿತು.

ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಸಚಿವರು, ಮಾಧ್ಯಮದವರು ಮೇಲೆ ರೀತಿಯ ಘಟನೆಗಳು ಆಗಬಾರದು. ಹಿರಿಯ ಅಧಿಕಾರಿಗಳ ಹಂತದಲ್ಲಿ ರೀತಿಯ ಘಟನೆಗಳು ಆಗುವುದಿಲ್ಲ. ಆದರೆ, ತಳ ಹಂತದಲ್ಲಿ ಒಮ್ಮೊಮ್ಮೆ ಘಟನೆಗಳು ನಡೆದಿರುವುದು ನನ್ನ ಗಮನಕ್ಕೆ ಬಂದಿದೆ ಎಂದರು.

ಮೈಸೂರಿನಲ್ಲಿ ಪೋಟೋಗ್ರಾರ್ಸ್ಮೇಲೆ ನಡೆದಿರುವ ಘಟನೆಯ ಬಗ್ಗೆ ಮೈಸೂರು ಪೊಲೀಸ್ ಆಯುಕ್ತರ ಜೊತೆ ಮಾತನಾಡುತ್ತೇನೆ. ತೀರ್ಥಹಳ್ಳಿ ಘಟನೆ ಬಗ್ಗೆಯೂ ಪರಿಶೀಲಿಸುತ್ತೇನೆ. ಎರಡೂ ಘಟನೆಗಳ ಬಗ್ಗೆ ಸೂಕ್ತ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ