Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೋಹತ್ಯೆ ಪ್ರಕರಣಗಳ ಸಮಗ್ರ ತನಿಖೆ-ಗೃಹ ಸಚಿವ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ನಡೆದಿರುವ ಗೋಹತ್ಯೆ ಪ್ರಕರಣಗಳನ್ನು ಗಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಗೋಹತ್ಯೆ ತಡೆಯಲು ಏನಾದರೂ ಉಪಾಯ ಕಂಡು ಹಿಡಿಯಬೇಕಿದೆ. ಇಂತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಮನಸ್ಥಿತಿ ಇರುವವರನ್ನು ಗುರುತಿಸಬೇಕು. ಈ ಪ್ರಕರಣಗಳ ಹಿಂದೆ ಯಾವುದಾದರೂ ಸಂಘಟನೆ ಇದ್ಯಾ, ಇಂಡುವಿಶ್ಯುಲ್ ಇದ್ದಾರಾ ಪರಿಶೀಲನೆ ಮಾಡಬೇಕು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಕುರಿತಂತೆ ಸೂಚನೆ ನೀಡಿರುವೆ ಎಂದು ಅವರು ತಿಳಿಸಿದರು.

ಮೈಕ್ರೋ ಫೈನಾನ್ಸ್ ಗಳ ದೌರ್ಜನ್ಯ, ಕಿರುಕುಳ ವಿಚಾರವಾಗಿ ಪ್ರತಿಕ್ರಿಯಿಸಿದ ಡಾ.ಪರಮೇಶ್ವರ್, ಹಣಕಾಸು ಇಲಾಖೆ ಇದಕ್ಕೆ ದಾರಿ ಹುಡುಕಬೇಕು‌. ಪೊಲೀಸ್ ಇದನ್ನು ಮಾಡುವುದಕ್ಕೆ ಬರಲ್ಲ. ಇನ್ನು ಬೀದರ್, ಮಂಗಳೂರು ದರೋಡೆ ಪ್ರಕರಣದ ಮಾಹಿತಿ ಕಲೆಹಾಕಲಾಗಿದೆ. ಶೀಘ್ರವಾಗಿ ಸೆಕ್ಯೂರ್ ಮಾಡುತ್ತೇವೆ. ಅವರು ಬೇರೆ ರಾಜ್ಯದವರು ಅಂತ ಮಾಹಿತಿ ಇದೆ ಎಂದು ಪರಮೇಶ್ವರ್ ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಸಭಾಪತಿ ಅವರು ಬದಲಾವಣೆ ಮಾಡಬೇಕು ಎನ್ನುವುದು ಯಾವ ಹಂತದಲ್ಲಿ ಚರ್ಚೆಯಾಗಿದೆ ಗೊತ್ತಿಲ್ಲ. ಬಿಜೆಪಿ ನಮಗೆ ಒಡೆದ ಮನೆ ಅಂತಿದ್ರು. ಅವರ ಮನೆಗೆ ಎಷ್ಟು ಬಾಗಿಲು ಹೇಳಬೇಕಲ್ಲ?. ನಮಗೆ ಹೇಳ್ತಿದ್ರಲ್ವಾ?. ಈಗ ಏನು ಮಾಡ್ತೀರಾ ಅಂತ ಕೇಳ್ತೇನೆ ಎಂದು ಅವರು ಪ್ರಶ್ನಿಸಿದರು.

ಕೇಂದ್ರ ಕಾರಾಗೃಹದ ವಿಭಜನೆ ಕುರಿತು ಮಾತನಾಡಿ, ಕೇಂದ್ರ ಕಾರಾಗೃಹದ ಭದ್ರತೆ ಮತ್ತಷ್ಟು ಹೆಚ್ಚಬೇಕು. ಜೈಲ್ ಸಿಬ್ಬಂದಿ ನೇಮಕವಾಗಬೇಕು. ಜೈಲ್ ಡಿವೈಡ್ ಸದ್ಯಕ್ಕೆ ಪ್ರಪೋಸಲ್ ನಮ್ಮ ಮುಂದಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ