Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎನ್‌ಎಸ್‌ಯುಐನಿಂದ ಬೃಹತ್ ಪಂಜಿನ ಮೆರವಣಿಗೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ
ನೀಟ್ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಶನಿವಾರ ರಾತ್ರಿ ಬೃಹತ್ ಪಂಜಿನ ಮೆರವಣಿಗೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಲಾಯಿತು.

ನಗರದ ಗಾಂಧಿ ವೃತ್ತದಿಂದ ಆರಂಭವಾದ ಪಂಜಿನ ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಒನಕೆ ಓಬವ್ವ ವೃತ್ತಕ್ಕೆ ತಲುಪಿತು. ಈ ವೇಳೆ ಸೇರಿದ ನೂರಾರು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಯ ವಿರುದ್ಧ ತೀವ್ರ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಖರ್ ಮಾತನಾಡಿ, "ಕೇಂದ್ರ ಸರ್ಕಾರದ ಬೇಜವಾಬ್ದಾರಿತನ ಹಾಗೂ ಅಸಡ್ಡೆಯಿಂದಾಗಿಯೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಹಗಲು-ರಾತ್ರಿ ಶ್ರಮಪಟ್ಟು ಓದಿದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಈ ಅನ್ಯಾಯಕ್ಕೆ ಕಾರಣರಾದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮಾತನಾಡಿ, "ಪ್ರಶ್ನೆ ಪತ್ರಿಕೆ ಸೋರಿಕೆಯ ಇಷ್ಟೊಂದು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಸರ್ಕಾರ ಅದರ ಹೊಣೆ ಹೊರಲು ಸಿದ್ಧವಿಲ್ಲ. ಇದರಿಂದ ಹತಾಶರಾಗಿರುವ ವಿದ್ಯಾರ್ಥಿಗಳು ದೇಶಾದ್ಯಂತ ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ. ಈಗಾಗಲೇ ದೇಶದ ವಿವಿಧೆಡೆ ಹದಿನೆಂಟು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವುಗಳಿಗೆ ಕೇಂದ್ರ ಸರ್ಕಾರದ ಹೊಣೆಗೇಡಿತನವೇ ನೇರ ಕಾರಣ. ಈ ಕೂಡಲೇ ಹಗರಣದ ಕುರಿತು ಪ್ರಾಮಾಣಿಕ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು" ಎಂದು ಒತ್ತಾಯಿಸಿದರು.

ಪ್ರಧಾನಿ ಮೋದಿಯವರ ಮೌನ ಖಂಡನೀಯ: ಪಿ.ರಘು
ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಮಾತನಾಡಿ
, "ಅಧಿಕಾರಿಗಳು ಮತ್ತು ವ್ಯವಸ್ಥೆಯ ಭ್ರಷ್ಟಾಚಾರದಿಂದಾಗಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಚಕಾರವೆತ್ತದೆ ಮೌನ ವಹಿಸಿರುವುದು ಖಂಡನೀಯ. ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಡಾಕ್ಟರ್ ಆಗುವ ಕನಸು ನುಚ್ಚುನೂರಾಗಿದೆ. ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ಪದತ್ಯಾಗ ಮಾಡಬೇಕು" ಎಂದರು.

ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ಜಿಲ್ಲಾಧ್ಯಕ್ಷ ಕಿರಣ್ ಯಾದವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಕಾರ್ಯಾಧ್ಯಕ್ಷ ಕೆ.ಎಂ. ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ. ಸಂಪತ್‌ಕುಮಾರ್, ಡಿ.ಎನ್. ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಪುತ್ರಿ ಹಿಮಾನಿ, ಪ್ರಮುಖರಾದ ಪ್ರಕಾಶ್ ರಾಮನಾಯ್ಕ್, ನ್ಯಾಯವಾದಿ ಮಹಮದ್ ರಫಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಭಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು