LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರ ಪಂಚಮಿ ಬದಲು ‘ಬಸವ ಪಂಚಮಿ’ ಆಚರಣೆಗೆ ಮಾನವ ಬಂಧುತ್ವ ವೇದಿಕೆ ಜಾಗೃತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಕೂನಿಕೆರೆ ಗ್ರಾಮದ ಕನ್ನಡ ಮತ್ತು ಉರ್ದು ಶಾಲೆಯ ಮಕ್ಕಳು
, ಪೋಷಕರು ಹಾಗೂ ಸಾರ್ವಜನಿಕರಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ನಾಗರ ಪಂಚಮಿಯ ಬದಲಾಗಿ ವೈಜ್ಞಾನಿಕ ಮನೋಭಾವದ 'ಬಸವ ಪಂಚಮಿ' ಆಚರಿಸುವ ಕುರಿತು ವಿಶೇಷ ಜಾಗೃತಿ ಅಭಿಯಾನ ಆಯೋಜಿಸಲಾಗಿತ್ತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ತಾಲೂಕು ಅಧ್ಯಕ್ಷ ಕೂನಿಕೆರೆ ಹೆಚ್.ಎಸ್. ಮಾರುತೇಶ, "ನಾಗರ ಪಂಚಮಿಯ ಹೆಸರಿನಲ್ಲಿ ಜೀವಂತ ಹಾವಿನ ಹುತ್ತಗಳಿಗೆ ಹಾಲು ಎರೆಯುವುದರಿಂದ ಹಾವಿನ ಶ್ವಾಸಕೋಶಕ್ಕೆ ಹಾನಿಯಾಗಿ ಅವುಗಳ ಪ್ರಾಣಕ್ಕೆ ಕಂಠಕ ಎದುರಾಗುತ್ತದೆ. ಇಂತಹ ಮೂಢನಂಬಿಕೆ ಹಾಗೂ ಪ್ರಾಣಿ ಹಿಂಸೆಗೆ ಇತಿಶ್ರೀ ಹಾಡಬೇಕಿದೆ," ಎಂದು ತಿಳಿಸಿದರು.

ಅಲ್ಲದೆ, "ಜಗಜ್ಯೋತಿ ಬಸವಣ್ಣನವರ 'ದಯವೇ ಧರ್ಮದ ಮೂಲವಯ್ಯ' ಎಂಬ ಸಿದ್ಧಾಂತದಂತೆ ಪ್ರತಿಯೊಬ್ಬರೂ ಪ್ರಕೃತಿ ರಕ್ಷಣೆ, ಪ್ರಾಣಿದಯೆ ಹಾಗೂ ವೈಜ್ಞಾನಿಕ ಆಲೋಚನೆಗಳನ್ನು ಜೀವನದಲ್ಲಿ ಬೆಳೆಸಿಕೊಳ್ಳಬೇಕು," ಎಂದು ಕರೆ ನೀಡಿದರು.

ಈ ಜಾಗೃತಿ ಕಾರ್ಯಕ್ರಮದಲ್ಲಿ ಕನ್ನಡ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ್, ಉರ್ದು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ಶಿಕ್ಷಕಿಯರಾದ ಸುಧಾಮಣಿ, ಪಾರ್ವತಿ, ಪ್ರೇಮ, ಅಸ್ಮತ್ ಉನ್ನಿಸ, ಬೀಬಿ ಹಾಜಿರಾ ಸೇರಿದಂತೆ ಗ್ರಾಮಸ್ಥರು ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ