Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾನವ ಬಂಧುತ್ವ ವೇದಿಕೆ ಆಧುನಿಕ ಅನುಭವ ಮಂಟಪವಿದ್ದಂತೆ – ಜಿ.ಎಸ್ ಮಂಜುನಾಥ್

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸತೀಶ್ ಜಾರಕಿಹೊಳೆಯವರು ಹುಟ್ಟುಹಾಕಿದ ‘ಮಾನವ ಬಂಧುತ್ವ ವೇದಿಕೆ’ಯು ಪ್ರಸ್ತುತ ದಿನಗಳಲ್ಲಿ 'ಆಧುನಿಕ ಅನುಭವ ಮಂಟಪ'ದ ಮಾದರಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್ ಮಂಜುನಾಥ್ ಅಭಿಪ್ರಾಯಪಟ್ಟರು.

ನಗರದ ರೋಟರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಗ್ರಾಮ ಸಂಚಾಲಕರ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮೂಢನಂಬಿಕೆಗಳ ವಿರುದ್ಧ ನಿರಂತರವಾಗಿ ಈ ವೇದಿಕೆ ಶ್ರಮಿಸುತ್ತಿದೆ. ಅಲ್ಲದೆ ಸಮಾಜದಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬಿತ್ತುವ ಮೂಲಕ ಜನಮನದಲ್ಲಿ ಗಟ್ಟಿಯಾಗಿ ಕೆಲಸ ಮಾಡುತ್ತಿದೆ ಎಂದು ಮಂಜುನಾಥ್ ಹೇಳಿದರು.

Advertisement

ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು ಮಾತನಾಡಿ "ಮಾನವ ಬಂಧುತ್ವ ವೇದಿಕೆಯು ಕೇವಲ ಒಂದು ಸಂಘಟನೆಯಲ್ಲ, ಇದು ದಾರ್ಶನಿಕರ ಆದರ್ಶಗಳನ್ನು ಪಾಲಿಸುವ ಪವಿತ್ರ ವೇದಿಕೆಯಾಗಿದೆ. ಸಮಾಜದಲ್ಲಿ ಮನೆಮಾಡಿರುವ ಕಂದಾಚಾರ ಹಾಗೂ ಮೂಢನಂಬಿಕೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮಹತ್ತರ ಕಾರ್ಯವನ್ನು ಈ ವೇದಿಕೆ ನಿರಂತರವಾಗಿ ನಿರ್ವಹಿಸುತ್ತಿದೆ" ಎಂದು ಹೇಳಿದರು.

ಕಸವನಹಳ್ಳಿ ರಮೇಶ್ ಮಾತನಾಡಿ "ಗೌತಮ ಬುದ್ಧ, ಜಗದ್ಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವೈಚಾರಿಕ ಸಂದೇಶಗಳನ್ನು ಸಾರುವ ಮೂಲಕ ಸಾರ್ವಜನಿಕರಲ್ಲಿ ಸೌಹಾರ್ದತೆ ಮತ್ತು ಜಾಗೃತಿ ಮೂಡಿಸುವ ಉದಾತ್ತ ಕೆಲಸವನ್ನು ಬಂಧುತ್ವ ವೇದಿಕೆ ಮಾಡುತ್ತಿದೆ" ಎಂದರು.

ಈ ಪ್ರಮುಖ ವಿಚಾರ ಸಂಕಿರಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕಿನ ಹಲವು ಮುಖಂಡರು ಭಾಗವಹಿಸಿದ್ದರು. ವೇದಿಕೆಯ ಜಿಲ್ಲಾ ಸಂಚಾಲಕ ಪಿ. ಬಸವರಾಜ, ವಕೀಲರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಣ್ಣ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಡಾ.ಜೆ.ಆರ್ ಸುಜಾತ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಸಿ. ಹೊರಕೇರಪ್ಪ, ಕೃಷ್ಣಮೂರ್ತಿ, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್. ಮೂರ್ತಿ, ಕಲ್ಲಹಟ್ಟಿ ಹರೀಶ್, ತಾಲ್ಲೂಕು ಸಂಚಾಲಕ ಕೂನಿಕೆರೆ ಮಾರುತೇಶ್, ಬೈಲಮ್ಮ, ಅಂಬಿಕಾ, ಹನುಮಂತಪ್ಪ, ಮಾರುತಿ, ತಾಲ್ಲೂಕಿನ ಮೂಲೆ ಮೂಲೆಗಳಿಂದ ಬಂದಿದ್ದ ಗ್ರಾಮ ಸಂಚಾಲಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ