Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿಯಾ ಮುಸ್ಲಿಂ ಸಮುದಾಯದಿಂದ ಹಸೇನ್ ಹುಸೇನ್ ಆಚರಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ನಗರದ ರಾಜ ಕಮಲ್ ರಸ್ತೆಯ  ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್  ಹುಸೇನ್ ಆಚರಣೆಯು ಬಹಳ   ಶ್ರದ್ದಾಭಕ್ತಿಯಿಂದ ನಡೆಯಿತು.

ಈ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ಅವರ ಮೊಮ್ಮಗ ಇಮಾಮ್ ಹುಸೇನ್ ಮತ್ತು ಅವರ ಪರಿವಾರದವರು ತ್ಯಾಗ ಮಾಡಿದ ಕರ್ಬಲಾ ಕದನವನ್ನು ಸ್ಮರಿಸುವ ಆಚರಣೆಯೇ ಹಸೇನ್-ಹುಸೇನ್ (ಮೊಹರಂ). ಧರ್ಮ, ನ್ಯಾಯ ಮತ್ತು ಸತ್ಯಕ್ಕಾಗಿ ನಡೆದ ಈ ಹೋರಾಟವು ಇಡೀ ಇಸ್ಲಾಮಿಕ್ ಇತಿಹಾಸದಲ್ಲಿ ಅತ್ಯಂತ ಪವಿತ್ರ ಮತ್ತು ದುರಂತದ ಘಟನೆಯಾಗಿದ್ದು, ಮುಸ್ಲಿಂ ಸಮುದಾಯದ  ಸಾವಿರಾರು ಭಕ್ತರು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ಇಮಾಮ್ ಹುಸೇನ್ ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.

Advertisement

ಧರ್ಮಗುರುಗಳ ನೇತೃತ್ವದಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಬ್ಲೇಡ್ , ಕತ್ತಿ ಸೇರಿದಂತೆ ಹರಿತ ಆಯುಧಗಳಿಂದ ತಮ್ಮ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಾರ್ಪಣೆ ಮಾಡಿ ತಮ್ಮ ಭಕ್ತಿ ಹಾಗೂ ಹರಕೆಯನ್ನು ಸಮರ್ಪಿಸಿದರು.

ಮೊಹರಂ ನಂತರದ ಏಳನೇ ದಿನ ನಡೆಯುವ ಈ ವಿಶಿಷ್ಟ ಆಚರಣೆಗೆ ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿದೇಶಗಳಿಂದ ಆಗಮಿಸಿದ್ದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಭಕ್ತರು ಪಾಲ್ಗೊಂಡಿದ್ದರು.

ನಗರದ ಕಿಲ್ಲಾ ಮಸೀದಿಯಲ್ಲಿ ಅಂಜುಮನ್-ಎ-ಹೈದರಿಯ ಸಂಘಟನೆಯ ನೇತೃತ್ವದಲ್ಲಿ ಹಾಗೂ ಹುಸೇನ್ ಕಮಿಟಿಯ ಸಹಯೋಗದಲ್ಲಿ ಈ ಧಾರ್ಮಿಕ ಆಚರಣೆ ಪ್ರತಿವರ್ಷ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆಗೆ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದೆ.

ಕರ್ನಾಟಕದಲ್ಲಿಯೂ ಈ ಸಂಪ್ರದಾಯ ಅತ್ಯಂತ ವೈಭವದಿಂದ ನಡೆಯುವ ಪ್ರಮುಖ ಸ್ಥಳವೆಂದು ಪರಿಗಣಿಸಲಾಗಿದೆ.

ಆಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಭಕ್ತಿಭಾವದಿಂದ ನೆರವೇರಿತು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ