Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಕನಕಪುರ:
ಮುಖ್ಯಮಂತ್ರಿ ಪಟ್ಟಕ್ಕಾಗಿ ಕಾಂಗ್ರೆಸ್​ನಲ್ಲಿ ​ ತೀವ್ರ ಸ್ವರೂಪ ತಂತ್ರ ಪ್ರತಿ ತಂತ್ರಗಳು ನಡೆಯುತ್ತಿ ಪಡೆದುಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳು ನಿತ್ಯ ತಂತ್ರ ಪ್ರತಿತಂತ್ರ ಹಣೆಯುತ್ತಿದ್ದು ಪಕ್ಷದಲ್ಲಿ ಸಾಕಷ್ಟು ಗೊಂದಲ ಮೂಡಿದೆ.


ನಾವು ಯಾರ ಬಣಕ್ಕೆ ಜಂಪ್ ಮಾಡಿದರೆ ನಮಗೆ ಭವಿಷ್ಯದಲ್ಲಿ ಅನುಕೂಲ ಆಗಲಿದೆ ಎನ್ನುವ ಗೊಂದಲದಲ್ಲಿ ಶಾಸಕರಿದ್ದಂತೆ ಕಾಣುತ್ತಿದೆ.


ಆದರೂ ಡಿಕೆ ಶಿವಕುಮಾರ್ ಬಣದಲ್ಲಿ 70ಕ್ಕೂ ಹೆಚ್ಚಿನ ಶಾಸಕರು ಬೆಂಬಲ ನೀಡಿರುವ ಕುರಿತು ಸುದ್ದಿಗಳು ಹರಡಿವೆ.
ಈ ನಡುವೆ ಡಿ.ಕೆ. ಶಿವಕುಮಾರ್​ ಸ್ಫೋಟಕ ಹೇಳಿಕೆ ನೀಡಿದ್ದು
, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ ಎಂದು ಒಂದು ಕಡೆ ಹೇಳಿದರೆ, ಕನಕಪುರದಲ್ಲಿ ಮಾತನಾಡಿರುವ ಅವರು, ಸಿಎಂ ಸ್ಥಾನ ಹಸ್ತಾಂತರ ಐದಾರು ಜನರ ಮಧ್ಯ ನಡೆದಿರುವ ಗುಟ್ಟಿನ ವಿಚಾರ. ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರೋದಕ್ಕೆ ನನಗೆ ಇಷ್ಟವಿಲ್ಲ.

ಪಕ್ಷ ಇದ್ದರೆ ನಾವೆಲ್ಲ, ಪಕ್ಷವನ್ನು ನಾನು ವೀಕ್ ಮಾಡುವುದಿಲ್ಲ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತೇನೆ ಅಂದಿದ್ದಾರೆ, ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ ಎಂದು ಡಿಕೆಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.


ಕಾಂಗ್ರೆಸ್ ಮುಖಂಡ ರಾಯರೆಡ್ಡಿ, ಬಿಜೆಪಿ ಮುಖಂಡ ಡಿವಿ ಸದಾನಂದಗೌಡ ಅವರ​ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ನಾನು ಅವರ ವಕ್ತಾರ ಅಲ್ಲ ಎಂದು ಇದೇ ವೇಳೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ