LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಬೆಳೆ ವಿಮೆ ಮೊತ್ತ ನಾನೇ ಕಟ್ಟುತ್ತೇನೆ-ಶಾಸಕ ಧೀರಜ್ ಮುನಿರಾಜ್

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸರಿಯಾದ ಸಮಯಕ್ಕೆ  ಮುಂಗಾರು ಮಳೆ  ಬಾರದೆ  ಬರ ಪರಿಸ್ಥಿತಿ ಉಂಟಾಗಿದ್ದು ರೈತರು ಸರಿಯಾದ ಸಮಯಕ್ಕೆ ಬಿತ್ತನೆ ಮಾಡಲಾಗದೆ ಹಾಗು ಅಂತರ್ಜಲ ಮಟ್ಟ ಮತ್ತು ಜನಜೀವನದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ. ಮಳೆ ಇಲ್ಲದೆ ಕೆರೆ-ಕಟ್ಟೆಗಳು ಬತ್ತಿಹೋಗುತ್ತಿದ್ದು
, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗಿದೆ.

ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ ರಾಗಿ ಬೆಳೆಗಾರರ ಪರವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಪ್ರೀಮಿಯಂ ಮೊತ್ತವನ್ನು ತಮ್ಮ ಸ್ವಂತ ವೆಚ್ಚದಲ್ಲಿ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಆಗಸ್ಟ್ 7ರಿಂದ 14ರವರೆಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿಗೆ ಅವಕಾಶವಿದ್ದು, ರಾಗಿ ಬೆಳೆಯುವ ರೈತರು ಅಗತ್ಯ ದಾಖಲೆಗಳೊಂದಿಗೆ ಶಾಸಕರ ನಿವಾಸಕ್ಕೆ ಆಗಮಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಒಂದು ಎಕರೆ ಜಮೀನಿಗೆ 400 ರೂ. ಪ್ರೀಮಿಯಂ ಪಾವತಿಸಬೇಕಿದ್ದು, ಈ ಮೊತ್ತವನ್ನು ತಮ್ಮ ವತಿಯಿಂದಲೇ ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಬೆಳೆ ನಾಶವಾದಲ್ಲಿ ರೈತರಿಗೆ ಸುಮಾರು 19,950 ರೂ. ವಿಮಾ ಪರಿಹಾರ ದೊರೆಯಲಿದ್ದು ಈ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಅರ್ಹ ರೈತರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ರೈತರು ತಮ್ಮ ಜಮೀನಿನ ಪಹಣಿ, ಫೂಟ್ ಐಡಿ, ಬಿಪಿಎಲ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳುವಂತೆ ಶಾಸಕ ಧೀರಜ್ ಮುನಿರಾಜ್ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರಾಗಿ ಬೆಳೆಗಾರರಿಗೆ ಈ ಯೋಜನೆ ಆರ್ಥಿಕ ಭದ್ರತೆಯನ್ನು ಒದಗಿಸಲಿದೆ ಎಂದು ಅವರು ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಹಿರಿಯೂರಿನಲ್ಲಿ ರಾಜಕೀಯ ಪಕ್ಷಗಳ ಸಭೆಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರ ಶಿಕ್ಷಣ ಮತ್ತು ಸಮಾಜಸೇವೆ ಆದರ್ಶನೀಯ ಬೇತೂರುಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನೆಶತಮಾನದ ಜ್ಞಾನ ದೇಗುಲ: ಹೀರದ ಸೂಗಮ್ಮ ಶಾಲೆಯ ಶತಮಾನೋತ್ಸವ ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ್ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ: ಪುಷ್ಪಾರ್ಚನೆ ಮಾಡಿ ಗೌರವ ನಮನ​ 'ನಶೆ ಮುಕ್ತ ಭಾರತ' ನಿರ್ಮಾಣಕ್ಕೆ ಪ್ರತಿಜ್ಞಾವಿಧಿ: ಬಿ. ವೈ. ವಿಜಯೇಂದ್ರ'ಅಗ್ನಿ-4' ಕ್ಷಿಪಣಿ ಉಡಾವಣೆ ಯಶಸ್ವಿ: ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ, 'ಆತ್ಮನಿರ್ಭರ ಭಾರತ'ಕ್ಕೆ ದಿಕ್ಸೂಚಿE20 ಎಥನಾಲ್ ಇಂಧನ ನೀತಿ ವಿರುದ್ಧ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ‘ಕಸದಿಂದ ಮುಕ್ತಿ’ ಅಭಿಯಾನಕ್ಕೆ ಬೆಸ್ಕಾಂ ಬೆಂಬಲ:ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ, ಶಾಸಕರಿಗೆ ಅಧಿಕಾರ ದಾಹ: ಸಚಿವ ಹೆಚ್.ಡಿ. ಕುಮಾರಸ್ವಾಮಿ