Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರೆಯುವೆ-ವಿಜಯೇಂದ್ರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವ ತವಕದಲ್ಲಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿರುವ ವಿಜಯೇಂದ್ರ ಅವರ ಕುರಿತು ಚರ್ಚೆಗಳು ಆರಂಭವಾಗಿವೆ.
ಇದರ ಬೆನ್ನಲ್ಲೇ ನಾಯಕತ್ವ ಸ್ಥಾನದಲ್ಲಿ ನಾನೇ ಮುಂದುವರೆಯುತ್ತೇನೆಂದು ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಎರಡು ವರ್ಷಗಳ ಪೂರೈಸಿದ ವಿಜಯೇಂದ್ರ ಅವರನ್ನು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭಧಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ನನಗೂ ವಿಶ್ವಾಸ ಇದೆ, ಹೈಕಮಾಂಡ್​​ನಿಂದ ಸ್ಪಷ್ಟತೆ ಸಿಗುತ್ತೆ ಎಂಬ ವಿಶ್ವಾಸ ಇದೆ. ನನಗಂತೂ ಸ್ಪಷ್ಟತೆ ಸಿಕ್ಕಿದೆ. ರಾಜ್ಯಾಧ್ಯಕ್ಷರಾಗಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಪರೋಕ್ಷವಾಗಿ ತಾವೇ ಮುಂದುವರೆಯುವ ಬಗ್ಗೆ ಸುಳಿವು ನೀಡಿದರು.

ಕರ್ನಾಟಕದ "ಭ್ರಷ್ಟ" ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿಗೆ ಬಿಹಾರದ ಗೆಲುವು ಭಾರಿ ಶಕ್ತಿ ನೀಡಿದೆ ಎಂದು ಹೇಳಿದರು.
ಈ ಹಿಂದೆ ನಮ್ಮ ಸರ್ಕಾರದ ವಿರುದ್ಧ ಶೇ.
40 ಕಮಿಷನ್ ಆರೋಪ ಮಾಡಿ, ಅಧಿಕಾರದಿಂದ ಕೆಳೆಗಿಳಿಸಿದ್ದರು. ಇದೀಗ ಅವರ ಪಕ್ಷ ಗ್ಯಾರಂಟಿ ಯೋಜನೆಗಳಿಂದಲೇ ಸೋಲು ಕಂಡಿದೆ. ಇದೀಗ ಕೇಂದ್ರದತ್ತ ಬೆರಳು ತೋರಿಸುತ್ತಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಮತಗಳ್ಳತನ ಅಭಿಯಾನದ ಮೂಲಕ ಬಿಹಾರದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು ರೂಪಿಸಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.

ರಾಹುಲ್ ಗಾಂಧಿ ಐರನ್ ಲೆಗ್ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಅವರು ಎಲ್ಲಿ ಕಾಲಿಡುತ್ತಾರೆಯೋ ಅಲ್ಲಿ ಅವರ ಪಕ್ಷ ಉದ್ಧಾರ ಆಗಲ್ಲ. ಇದಕ್ಕೆ ಬಿಹಾರ ಫಲಿತಾಂಶವೇ ಸ್ಪಷ್ಟ ಸಂದೇಶ. ಹಾಗಾಗಿ ರಾಹುಲ್ ಗಾಂಧಿ ದೇಶದಿಂದ ಮಾಯವಾಗಿದ್ದರು ಎಂದು ಅವರು ಟೀಕಿಸಿದರು.
ಬಿಜೆಪಿ ಅಭಿವೃದ್ಧಿ ಮಾಡುತ್ತಿರುವುದನ್ನು ನೋಡಿ ಅವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕಾಗಿಯೇ ದೇಶದಲ್ಲಿ
, ದೇಶದ ಹೊರಗೆ ಭಾರತ ವಿರೋಧಿ,‌ ಬಿಜೆಪಿ ವಿರೋಧಿ ಹೇಳಿಕೆ ಕೊಡುತ್ತಾರೆ. ಅವರಿಗೆ ಸೂಕ್ತ ವಿಷಯಗಳು ಸಿಗದೇ ವೋಟ್ ಚೋರಿ ಎಂಬ ಖಾಲಿ ಡಬ್ಬಾ ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಬಿಹಾರ ಫಲಿತಾಂಶ ನಮಗೆ ಆನೆ ಬಲ ಕೊಟ್ಟಿದೆ. ಒಂದು ಸಂದೇಶವನ್ನೂ ಈ ಫಲಿತಾಂಶ ನೀಡಿದೆ ಎಂದು ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಬರೆದಿರುವ 'ನೀರಿನ ಹೆಜ್ಜೆ' ಕೃತಿ ಬೇರೆಯವರು ಬರೆದ ಪುಸ್ತಕದ ಮೇಲೆ ಶಿವಕುಮಾರ್ ಅವರ ಚಿತ್ರವನ್ನು ಹಾಕಲಾಗಿದೆ. ಪುಸ್ತಕವನ್ನು ಹೊರತುಪಡಿಸಿ, ಜಲಸಂಪನ್ಮೂಲ ಸಚಿವರಾಗಿ ರಾಜ್ಯಕ್ಕೆ ಅವರ ಕೊಡುಗೆ ಏನು ಎಂದು ವಿಜಯೇಂದ್ರ ತೀಕ್ಷ್ಣವಾಗಿ ಪ್ರಶ್ನಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ