Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಿಕೆಗಳು ಜನರ ಹಿತ ಮರೆತರೆ ಸಮಾಜಕ್ಕೆ ಕಂಟಕ: ಶಾಸಕ ರಘುಮೂರ್ತಿ

Advertisement
 ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸರ್ಕಾರದ ವೈಪಲ್ಯಗಳನ್ನು
, ಸಮಾಜದ ಅಂಕುಡೊಂಕು, ಭ್ರಷ್ಟಾಚಾರ ನಿಯಂತ್ರಿಸಲು, ಸರ್ಕಾರದಿಂದ ವಂಚಿತರಾದ ಜನರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಪತ್ರಿಕೆಗಳು ಹಾಗೂ ಪತ್ರಕರ್ತರು ನಿರಂತರ ಮಾಡುತ್ತಾ ಬಂದಿದ್ದು, ಅವರ ಪರಿಶ್ರಮದ ಫಲವಾಗಿ ಇಂದು ಸಮಾಜದಲ್ಲಿ ಉತ್ತಮ ಪ್ರಗತಿಕಾಣುತ್ತಿದೆ. ಪತ್ರಿಕೆಗಳು ಜನರಹಿತವನ್ನು ಮರೆತರೆ ಸಮಾಜಕ್ಕೆ ಕಂಟಕಪ್ರಾಯವೆಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಭಾನುವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯಾಧ್ಯಕ್ಷ ಬಂಗ್ಲೆಮಲ್ಲಿಕಾರ್ಜುನ್ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯದ ಯಾವುದೇ ಮೂಲೆಯಲ್ಲಿ ಪತ್ರಕರ್ತರ ಮೇಲೆ ದೌರ್ಜನ್ಯ ನಡೆದರೆ ಆ ಗ್ಗೆ ಖಂಡಿಸಿ ಹೋರಾಟ ನಡೆಸುತ್ತಾ ಬಂದಿದೆ. ಸರ್ಕಾರ ದಿನಪತ್ರಿಕೆ ಮತ್ತು ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಲ್ಲಿ ವಿಫಲವಾಗಿದೆ ಎಂದರು.

ಹಿರಿಯ ನ್ಯಾಯವಾದಿ ಕೆ.ಎಂ.ನಾಗರಾಜು, ಸಾಹಿತಿ, ಪತ್ರಕರ್ತ ಕೊರ್‍ಲಕುಂಟೆತಿಪ್ಪೇಸ್ವಾಮಿ, ಪತ್ರಿಕಾರಂಗದ ಆಗೂಹೋಗುಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷ ಹೊನ್ನೂರು ಮಾರಣ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾಸುರೇಶ್‌ಬಾಬು,

ನಗರಸಭೆ ಅಧ್ಯಕ್ಷೆ ಶಿಲ್ಪಮುರುಳಿ, ಉಪಾಧ್ಯಕ್ಷೆ ಕವಿತಾಬೋರಯ್ಯ, ಸದಸ್ಯರಾದ ಮಂಜುಳಾ, ನನ್ನಿವಾಳ ಗ್ರಾಪಂ ಅಧ್ಯಕ್ಷೆ ಶಿವಮ್ಮ, ಬೆಂಗಳೂರು ನಗರ ಅಧ್ಯಕ್ಷ ರುದ್ರಮುನಿ, ಜಿಲ್ಲಾಧ್ಯಕ್ಷ ಆರ್.ದ್ಯಾಮರಾಜ್, ದಿನೇಶ್, ಶಂಕರ್, ಡಿ.ವೀರಣ್ಣ, ಜಾಲಿಮಂಜು, ಮುರುಡೇಗೌಡ, ಚಿದಾನಂದಮೂರ್ತಿ ಮುಂತಾದವರು ಭಾಗವಹಿಸಿದ್ದರು. ಪತ್ರಕರ್ತರ ರಾಮಾಂಜನೇಯ ಮತ್ತು  ನಗರಸಭೆ ಅಧ್ಯಕ್ಷೆ ಶಿಲ್ಪಮುರುಳಿ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ