Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ ಎಂದು ಜೆಡಿಎಸ್ ನಟ ಕಮಲ್ ಹಾಸನ್ ವಿರುದ್ಧ ವಾಗ್ದಾಳಿ ಮಾಡಿದೆ.


ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಬಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು. ಕಮಲ್‌ ಹಾಸನ್‌ ಅವರೇ ನಿಮ್ಮ ಪ್ರಚಾರದ ತೆವಲಿಗೆ ಮತ್ತೊಂದು ಭಾಷೆಯನ್ನು ಹೀಯಾಳಿಸುವುದು ತರವೇ ? ಬಹು ಭಾಷಾ ನಟರಾಗಿ ಇಂತಹ ಅಪ್ರಬುದ್ಧ ಹೇಳಿಕೆ ನೀಡುವುದು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ಎಚ್ಚರಿಸಿದೆ.

ತಮಿಳು ಭಾಷೆಯ ಮೇಲಿನ ನಿಮ್ಮ ಅಭಿಮಾನವನ್ನು ತೋರ್ಪಡಿಸಲು ಕನ್ನಡಕ್ಕೆ ಅಪಮಾನಿಸುವುದನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. 

ದ್ರಾವಿಡ ಭಾಷೆಗಳಲ್ಲಿ ತಮಿಳಿನಂತೆ ಕನ್ನಡವೂ ಒಂದು ಸ್ವತಂತ್ರ ಭಾಷೆ. ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾಷೆ. ಕನ್ನಡ ವಿಶ್ವ ಲಿಪಿಗಳ ರಾಣಿ ಎಂಬುದನ್ನು ಇತಿಹಾಸ ತಜ್ಞರೇ ಒಪ್ಪಿದ್ದಾರೆ ಮೆಚ್ಚಿದ್ದಾರೆ. ವಿಶ್ವದ ಅತ್ಯಂತ ಸುಂದರವಾದ ಭಾಷೆಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿದೆ.

ಭಾಷೆಯ ಬಗ್ಗೆ ಸರ್ಟಿಫಿಕೇಟ್ ಕೊಡಲು ನೀವೇನು ಭಾಷಾ ವಿಜ್ಞಾನಿಯೇ ? ಭಾಷಾ ವಿಜ್ಞಾನ ಗೊತ್ತಿರದ ಅವಿವೇಕಿಗಳಿಂದ ಮಾತ್ರ ಇನ್ನೊಂದು ಭಾಷೆ ಬಗ್ಗೆ ಲಘುವಾಗಿ ಮಾತಾನಾಡಲು ಸಾಧ್ಯ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

ಕನ್ನಡ ಭಾಷೆಯು ಸಾವಿರಾರು ವರ್ಷಗಳಿಗೂ ಹೆಚ್ಚು ಪುರಾತನವಾದ ಚಾರಿತ್ರಿಕ ಮತ್ತು ಐತಿಹಾಸಿಕ ಹಿನ್ನೆಲೆಯುಳ್ಳ ಭಾಷೆ ಎಂಬುದನ್ನು ತಾವು ಮೊದಲು ಅರಿಯಿರಿ ಎಂದು ಜೆಡಿಎಸ್ ತಾಕೀತು ಮಾಡಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ