Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ಕಾರ್ಯದರ್ಶಿಯವರನ್ನು ಭೇಟಿ ಮಾಡಿದ IMF ತಂಡ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿತು.


ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡವು ಸ್ಥೂಲ ಆರ್ಥಿಕ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವುದರೊಂದಿಗೆ ಹಣಕಾಸು ಸಚಿವಾಲಯ, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಇತರ ಸರ್ಕಾರಿ ಅಧಿಕಾರಿಗಳಿಗೆ ನೀತಿ ಸಲಹೆಗಳನ್ನು ನೀಡುತ್ತದೆ.


ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡುವುದು, ಹಣಕಾಸಿನ ಸುಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಮತ್ತು ಮಾನವ ಬಂಡವಾಳವನ್ನು ಬಲಪಡಿಸುವುದರೊಂದಿಗೆ, ಹವಾಮಾನ ಕೇಂದ್ರಿತ ನೀತಿಗಳನ್ನು ಮುಂದುವರಿಸುವ ಕುರಿತು ರಚನಾತ್ಮಕ ಸವಾಲುಗಳನ್ನು ಗುರಿಯಾಗಿರಿಸಿಕೊಂಡು ರಾಜ್ಯ ಮಟ್ಟದ ಉಪಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಯಿತು. ಸಂದರ್ಭದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಉಮಾ ಮಹದೇವನ್ ಸಹ ಹಾಜರಿದ್ದರು.


ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ ತಂಡದಲ್ಲಿ ಸಹಾಯಕ ನಿರ್ದೇಶಕ ಮತ್ತು ಮಿಷನ್ ಮುಖ್ಯಸ್ಥರಾದ ಹೆರಾಲ್ಡ್ ಫಿಂಗರ್ ಅವರೊಂದಿಗೆ ಭಾರತದ ಹಿರಿಯ ನಿವಾಸಿ ಪ್ರತಿನಿಧಿ ರನಿಲ್ ಸಲ್ಗಾಡೊ, ಏಷ್ಯ ಮತ್ತು ಪೆಸಿಫಿಕ್ ಇಲಾಖೆಯ ಹಿರಿಯ ಅರ್ಥಶಾಸ್ತ್ರಜ್ಞೆ ನುಜಿನ್ ಸುಫಾಫಿಫಟ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗದ (IMF) ಅರ್ಥಶಾಸ್ತ್ರಜ್ಞೆ ಗೀತಿಕಾ ಡ್ಯಾಂಗ್ ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ