Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಡಲೇ ಸಚಿವರು, ಕಾರ್ಯದರ್ಶಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಲು ಸೂಚನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು, ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯಬೇಕು ಎಂದು ಸಿಎಂ ತಿಳಿಸಿದರು.

ಸದ್ಯ ತೆಗೆದುಕೊಂಡಿರುವ ಕ್ರಮಗಳು:
ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳಾಗಿ ಗುರುತಿಸಲಾಗಿದೆ. ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. 

ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.973 ಕೋಟಿ ಅನುದಾನ ಲಭ್ಯವಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ