Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾಜಿ ನಗರಸಭೆ ಸದಸ್ಯ ಅಜ್ಜಪ್ಪ ಅವರನ್ನು ತಕ್ಷಣವೇ ವಜಾಗೊಳಿಸಿ- ವಿ. ಶಿವಣ್ಣ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಮಾಜಿ ನಗರಸಭೆ ಸದಸ್ಯ ಅಜ್ಜಪ್ಪ ಅವರನ್ನು ತಕ್ಷಣವೇ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಹಿರಿಯೂರು ಟೌನ್ ಮಾಜಿ ನಗರಸಭಾ ಸದಸ್ಯ ವಿ. ಶಿವಣ್ಣ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಜ್ಜಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪಕ್ಷದ ಶಿಸ್ತು ಉಲ್ಲಂಘಿಸಿರುವ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ನಾಯಕರಿಗೆ ವಿನಂತಿಸಿದ್ದಾರೆ.

Advertisement

ಪಕ್ಷ ವಿರೋಧಿ ಚಟುವಟಿಕೆಯ ಆರೋಪಗಳು:
ಅಭ್ಯರ್ಥಿ ತಂದು ಪ್ರಚಾರ: ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಬೇರೊಬ್ಬ ಪಕ್ಷೇತರ ಅಭ್ಯರ್ಥಿಯನ್ನು ಕರೆತಂದು
, ಅವರ ಪರವಾಗಿ ಬಹಿರಂಗ ಪ್ರಚಾರ ನಡೆಸಿದ್ದಾರೆ.

ದಿಗಂತ ನಾಯಕರಿಗೆ ನಿಂದನೆ: ಹಾಲಿ ಶಾಸಕರೂ ಹಾಗೂ ಸಚಿವರೂ ಆಗಿದ್ದ ದಿವಂಗತ ಡಿ. ಸುಧಾಕರ್ ಅವರ ವಿರುದ್ಧ ಗಲ್ಲಿ ಗಲ್ಲಿಗಳಲ್ಲಿ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಕೃತಿ ಮೆರೆದಿದ್ದಾರೆ.

ನಾಯಕರ ಅವಹೇಳನ: ತಾಲೂಕಿನ ಹಿರಿಯ ನಾಯಕರು, ಮುಖಂಡರು ಹಾಗೂ ಪಕ್ಷದ ಅಧ್ಯಕ್ಷರುಗಳ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.

ಶಿಸ್ತು ಕ್ರಮಕ್ಕೆ ಹಿರಿಯ ನಾಯಕರಿಗೆ ವಿನಂತಿ:
ಪಕ್ಷದ ಸೌಹಾರ್ದತೆ ಮತ್ತು ಶಿಸ್ತನ್ನು ಹಾಳು ಮಾಡುತ್ತಿರುವ ಮಾಜಿ ನಗರಸಭೆ ಸದಸ್ಯ ಅಜ್ಜಪ್ಪ ಅವರನ್ನು ಈ ಕೂಡಲೇ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಹಿರಿಯೂರು ಟೌನ್ ಮಾಜಿ ನಗರಸಭಾ ಸದಸ್ಯ ವಿ. ಶಿವಣ್ಣ ಅವರು ಈ ಕೆಳಕಂಡ ನಾಯಕರಲ್ಲಿ ಮನವಿ ಮಾಡಿದ್ದಾರೆ.

ನೂತನ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾ ಕಾರ್ಯಾಧ್ಯಕ್ಷ ಹಾಲೇಶ್,  ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಖಾದಿ ರಮೇಶ್ ಹಾಗೂ ಈರಲಿಂಗೇಗೌಡ ಇವರುಗಳು ಪಕ್ಷದ ಹಿತದೃಷ್ಟಿಯಿಂದ ಇಂತಹ ವಿಚ್ಛಿತ್ರಕಾರಕ ಶಕ್ತಿಗಳನ್ನು ಪಕ್ಷದಿಂದ ದೂರ ಇಡಬೇಕೆಂದು ಈ ಮೂಲಕ ಶಿವಣ್ಣ ಅವರು ಆಗ್ರಹಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು