Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳೆ ವಿಮೆ ಕಟ್ಟಿರುವ ಎಲ್ಲ ರೈತರಿಗೂ ಕೂಡಲೇ ಬೆಳೆ ವಿಮೆ ಪಾವತಿಸಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ೨೦೨೨-೨೩ ನೇ ಸಾಲಿನಲ್ಲಿ ವಿಪರೀತ ಮಳೆ ಸುರಿದು ಪ್ರಕೃತಿ ವಿಕೋಪವಾಗಿದ್ದು ವಾಡಿಕೆ ಮಳೆಗಿಂತ ಶೇ. ೮೦ರಷ್ಟು
ಹೆಚ್ಚಾಗಿದ್ದು, ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿ ಅನೇಕ ರೋಗಗಳು ಹೆಚ್ಚಾಗಿವೆ ಮತ್ತು ೨೦೨೩ರಲ್ಲಿ ಉಷ್ಣಾಂಶ ಕೂಡ ೪೦ ಡಿಗ್ರಿ ಆಗಿದೆ.

ಆದ್ದರಿಂದ ಬೆಳೆ ವಿಮೆ ಕಟ್ಟಿರುವ ಎಲ್ಲ ರೈತರಿಗೂ ಕೂಡಲೇ ಬೆಳೆ ವಿಮೆ ಪಾವತಿಸಬೇಕು ಮತ್ತು ಹೊಸದುರ್ಗ ತಾಲೂಕಿನಲ್ಲಿ ತೆಂಗು ಅಭಿವೃದ್ಧಿ ಯೋಜನೆಯಲ್ಲಿ ವಿತರಿಸುತ್ತಿರುವ ಗೊಬ್ಬರ ಹಾಗೂ ಕೀಟನಾಶಕ ಕಳಪೆ ಮತ್ತು ರೈತರಿಗೆ ವಿತರಿಸದೆ ಹಣ ಪಡೆದಿರುತ್ತಾರೆ ಮತ್ತು ಎಲ್ಲಾ ತಾಲೂಕುಗಳನ್ನು ಗೊಬ್ಬರ ಬೀಜ ಹಾಗೂ ಪರಿಕರಗಳಲ್ಲಿ ಬಹಳಷ್ಟು ಕಳಪೆ ಹಾಗೂ ದುಬಾರಿ ಬೆಲೆಗೆ ಮಾರಾಟವಾಗುತ್ತಿದ್ದು ಮತ್ತು ನಕಲಿ ದಾಖಲೆ ಸೃಷ್ಟಿಸಿ ಬಿಲ್ ಮಾಡಲಾಗುತ್ತದೆ.

ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತನಿಖೆ ನಡೆಸಿ ತಪ್ಪಿತಸ್ಥ ಕಂಪನಿ ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವಾರದೊಳಗಾಗಿ ಅಡಿಕೆ ಬೆಳೆಗೆ ವಿಮೆ ಪಾವತಿಸದೇ ಇದ್ದರೇ ತಮ್ಮ ಇಲಾಖೆ ಮುಂಭಾಗದಲ್ಲಿ ೦೬ ತಾಲ್ಲೂಕಿನ ರೈತರೊಂದಿಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ ರವರಿಗೆ ಮನವಿಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ರಂಗಸ್ವಾಮಿ, ಹೊಳಲ್ಕೆರೆ ರಂಗಣ್ಣ, ಜಯಣ್ಣ, ವೀರಭದ್ರಪ್ಪ, ಹಿರಿಯೂರು ಸಿದ್ರಾಮಣ್ಣ, ಸಣ್ಣ ತಿಮ್ಮಣ್ಣ, ಗಿರೀಶ್, ಚಳ್ಳಕೆರೆ ಶ್ರೀಕಂಠ ಮೂರ್ತಿತಿಪ್ಪೇಸ್ವಾಮಿ, ಚನ್ನಕೇಶವ, ಹೊಸದುರ್ಗ ರಾಮಣ್ಣ, ಪ್ರಸನ್ನ, ಈರಣ್ಣ, ರಾಮಣ್ಣ, ಮೀಸೆ ಗೌಡ ಹಾಗೂ ಇನ್ನಿತರರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ