Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನೌಕರರಿಗೆ ನಗದು ರಹಿತ ಚಿಕಿತ್ಸಾ ವೆಚ್ಚ ಯೋಜನೆ ಜಾರಿ–ಸಿಎಂ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಮಾರು 34 ಸಾವಿರ ನೌಕರರು ಮತ್ತು ಅವಲಂಭಿತರಿಗೆ ಸುಮಾರು 272 ಸರ್ಕಾರಿ / ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸಾ ಯೋಜನೆ ಜಾರಿಗೆ ತಂದಿದ್ದು, ಇದಕ್ಕೆ ಒಟ್ಟು 46 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಸಾರಿಗೆ ನೌಕರರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಯೋಜನೆಯನ್ನು ಜಾರಿಗೆ ತರಲಾಗಿದೆ. ನೌಕರರ ಕುಟುಂಬದವರು ನಗದು ರಹಿತ ಚಿಕಿತ್ಸಾ ಯೋಜನೆಗೆ ಅರ್ಹರಾಗಿರುತ್ತಾರೆ. ಅವರು ಎಲ್ಲಿ ನೆಲೆಸಿರುವರೋ ಅಲ್ಲಿಯೇ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ನೌಕರರು ಪ್ರತಿ ತಿಂಗಳು ರೂ 650 ನ್ನು ಯೋಜನೆಗೆ ಮೀಸಲಿಡಬೇಕು. ಸರ್ಕಾರವು ಪ್ರತಿ ವರ್ಷ 20 ಕೋಟಿ ಧನ ಸಹಾಯ ಮಾಡಲಿದೆ. ಉಳಿದಂತೆ ನೌಕರರ ವಂತಿಕೆಯಿಂದ ಬಂದ ಹಣವನ್ನು ಯೋಜನೆಗೆ ಉಪಯೋಗಿಸಲಾಗುವುದು ಎಂದರು. ಯೋಜನೆ ನಿಗಮದ ನೌಕರರು ಹಾಗೂ ಕುಟುಂಬದವರಿಗೆ ಬಹಳಷ್ಟು ಅನುಕೂಲವಾಗಲಿದೆ.

ಮುಂಬರುವ ದಿನಗಳಲ್ಲಿ ಬಿ.ಎಂಟಿ.ಸಿ ನೌಕರರಿಗೂ ಯೋಜನೆಯನ್ನು ವಿಸ್ತರಿಸಲಾಗುವುದು. ಯೋಜನೆಯಡಿ 272 ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಒಡಂಬಡಿಕೆ ಮಾಡಿಕೊಳ್ಳಲಾದ ಆಸ್ಪತ್ರೆಗಳು, ನೌಕರರು ಮತ್ತು ಅವಲಂಬಿತರಿಗೆ ತಾರತಮ್ಯ ತೋರದೇ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಸ್ಪಂದಿಸಬೇಕು ಎಂದರು.

ಲಿಂಗ ತಾರತಮ್ಯ ಹೋಗಲಾಡಿಸಲು ಹಾಗೂ ಮಹಿಳೆಯರಲ್ಲಿ ಶಕ್ತಿ ತುಂಬಲು ಶಕ್ತಿ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗಿದೆ. ಶಕ್ತಿ ಯೋಜನೆ ಪರಿಣಾಮ ಧಾರ್ಮಿಕ ಸ್ಥಳಗಳು ಮತ್ತು ಪ್ರವಾಸೋದ್ಯಮ ಸಂಸ್ಥೆಗಳಿಗೆ ಭಕ್ತರ ಮತ್ತು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಆರ್ಥಿಕವಾಗಿ ವೃದ್ದಿ ಕಂಡಿದೆ. ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳೂ ನನಗೂ ಪತ್ರ ಬರೆದಿದ್ದಾರೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ನೌಕರರ ಬಹುದಿನದ ಬೇಡಿಕೆಯಾಗಿದ್ದ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ಇದರಿಂದ ಸುಮಾರು 34 ಸಾವಿರ ನೌಕರರು ಮತ್ತು ಅವರ ಅವಲಂಬಿತರಿಗೆ ಯೋಜನೆಯು ಸಹಾಯವಾಗಲಿದೆ ಎಂದರು.

ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಎಸ್.ಆರ್. ಶ್ರೀನಿವಾಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಿಗಮದ ನೌಕರರು ಸುಮಾರು 272 ಆಸ್ಪತ್ರೆಗಳು, 24 ಡಯಾಗ್ನೋಸ್ಟಿಕ್ ಕೇಂದ್ರ, 6 ಆಯುಶ್ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಪ್ರತಿ ದಿನ 8849 ವಾಹನಗಳ ಮೂಲಕ 28.50 ಲಕ್ಷ ಕಿ.ಮಿ. ಕ್ರಮಿಸಿ 34.92 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸಲಾಗುತ್ತಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಟ್ಟು 24,282 ಬಸ್ಸುಗಳನ್ನು ಹೊಂದಿದ್ದು, ದೇಶದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ. ನಿಗಮಗಳಿಗೆ 4301 ಹೊಸ ಬಸ್ಸುಗಳು ಸೇರ್ಪಡೆಗೊಂಡಿವೆ. ನಾಲ್ಕು ನಿಗಮಗಳಲ್ಲಿ ಸುಮಾರು 9 ಸಾವಿರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ನಿಗಮದ ನೌಕರರು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಸಹಭಾಗಿತ್ವ ಯೋಜನೆಯಡಿ, ಸರ್ಕಾರದ ಅನುದಾನದ ಜೊತೆಗೆ ನೌಕರರ ವಂತಿಕೆಯನ್ನು ಸಹ ಪರಿಗಣಿಸಲಾಗುವುದು. ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡು ವಿತರಿಸಲಾಗುವುದು. ಇದರಿಂದ ನಿಗದಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು ಎಂದರು.

ಸಾರಿಗೆ ಸುರಕ್ಷಾ ವಿಮಾ ಯೋಜನೆಯಡಿ 1 ಕೋಟಿ ರೂಪಾಯಿಗಳ ಅಪಘಾತ ವಿಮೆಯನ್ನು 24 ನೌಕರರ ಕುಟುಂಬದವರಿಗೆ ವಿತರಿಸಲಾಗಿದೆ. ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆಯಡಿ ವಿವಿಧ ರೋಗಗಳಿಂದ ಮೃತ ಪಟ್ಟ ನಿಗಮದ ನೌಕರರಿಗೆ ಮೊದಲಿದ್ದ 3 ಲಕ್ಷ ಪರಿಹಾರ ಮೊತ್ತವನ್ನು 10 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಇದರಲ್ಲಿ ಒಟ್ಟು 94 ಸಿಬ್ಬಂದಿಗಳ ಅವಲಂಬಿತರಿಗೆ 9.40 ಕೋಟಿ ಪರಿಹಾರವನ್ನು ನೀಡಲಾಗಿದೆ. ನಿಗಮದ 1227 ಹಳೆಯ ವಾಹನಗಳನ್ನು ಪುನಃಶ್ಚೇತನಗೊಳಿಸಲಾಗಿದೆ ಎಂದರು.

ಸಂದರ್ಭದಲ್ಲಿ  ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳ ಕುಟುಂಬಗಳಿಗೆ ಚೆಕ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಶಾಸಕಿ ನಯನ ಮೋಟಮ್ಮ, ಸರ್ಕಾರದ ಮುಖ್ಯ ಸಚೇತಕರಾದ ಆಶೋಕ್ ಪಠಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ