ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ತೆರಿಗೆ ಸಂಗ್ರಹ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ತೆರಿಗೆ ಸಂಗ್ರಹದ ಸದ್ಯದ ಸ್ಥಿಗತಿ ಹಾಗೂ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಡಿ.ಕೆ. ಶಿವಕುಮಾರ್, ರಾಜ್ಯದ ಆದಾಯ ಹೆಚ್ಚಿಸಲು ಮತ್ತು ಪ್ರಗತಿಯನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಮಹತ್ವದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರರಾದ ಎಲ್. ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.



