Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜೆಡಿಎಸ್ ಬಿಎಲ್‌ಎಗಳ ಮಹತ್ವದ ಸಭೆ: ನಿಖಿಲ್ ಭಾಗಿ

ಚಂದ್ರವಳ್ಳಿ ನ್ಯೂಸ್, ​​ಬೆಂಗಳೂರು:
ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಪಕ್ಷದ ಬಿಎಲ್‌ಎ-1 ಹಾಗೂ ಪ್ರಮುಖ ಮುಖಂಡರ "ಬಿಎಲ್‌ಎಗಳ ಜವಾಬ್ದಾರಿ ವಿಶೇಷ ಸಭೆ" ಜರುಗಿತು.

​ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ, ಮುಂಬರುವ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಬಿಎಲ್‌ಎಗಳ ಕರ್ತವ್ಯಗಳ ಕುರಿತು ಸಮಾಲೋಚನೆ ನಡೆಸಿದರು.

Advertisement

​ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಮುಖ ವೇಳಾಪಟ್ಟಿ:
​ಸಭೆಯಲ್ಲಿ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆಯ ಹಂತಗಳನ್ನು ಪಕ್ಷದ ಪದಾಧಿಕಾರಿಗಳಿಗೆ ವಿವರಿಸಲಾಗಿದ್ದು
, ಅದರ ವಿವರಗಳು ಹೀಗಿವೆ.

​ಜೂನ್ 20 ರಿಂದ 29: ಚುನಾವಣಾ ಅಧಿಕಾರಿಗಳು ನಡೆಸುವ ತರಬೇತಿ ಕಾರ್ಯಾಗಾರಗಳು ಮತ್ತು ಸಭೆಗಳಲ್ಲಿ ಬಿಎಲ್‌ಎಗಳು ಕಡ್ಡಾಯವಾಗಿ ಭಾಗವಹಿಸುವುದು.

​ಜೂನ್ 30 ರಿಂದ ಜುಲೈ 29: ಮನೆ-ಮನೆ ಗಣತಿ ಪ್ರಕ್ರಿಯೆ.
​ಆಗಸ್ಟ್ 5: ಕರಡು ಮತದಾರರ ಪಟ್ಟಿ ಪ್ರಕಟಣೆ.
​ಆಗಸ್ಟ್ 5 ರಿಂದ ಸೆಪ್ಟೆಂಬರ್ 4: ಹೊಸದಾಗಿ ಹೆಸರು ಸೇರ್ಪಡೆ
, ತಿದ್ದುಪಡಿ ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ.
​ಆಗಸ್ಟ್ 5 ರಿಂದ ಅಕ್ಟೋಬರ್ 3: ಸಲ್ಲಿಕೆಯಾದ ಆಕ್ಷೇಪಣೆಗಳ ವಿಚಾರಣೆ ಮತ್ತು ವಿಲೇವಾರಿ.
​ಅಕ್ಟೋಬರ್ 7: ಅಂತಿಮ ಮತದಾರರ ಪಟ್ಟಿ ಬಿಡುಗಡೆ.

​ಅಧಿಕಾರಿಗಳೊಂದಿಗೆ ಸಹಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಕರೆ:
​"ಚುನಾವಣಾ ಅಧಿಕಾರಿಗಳು ನೀಡುವ ನಿರ್ದೇಶನಗಳನ್ನು ಬಿಎಲ್‌ಎಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿಯೊಂದು ಹಂತದಲ್ಲೂ ಅಧಿಕಾರಿಗಳಿಗೆ ಪೂರ್ಣ ಸಹಕಾರ ನೀಡುವ ಮೂಲಕ ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಬಿಎಲ್‌ಎಗಳ ಜವಾಬ್ದಾರಿಯಾಗಿದೆ" ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಲಾಯಿತು.

​ಈ ವಿಶೇಷ ಸಭೆಯಲ್ಲಿ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಮತ್ತು ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಪಕ್ಷದ ಬಿಎಲ್‌ಎಗಳು ಉಪಸ್ಥಿತರಿದ್ದರು.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು