Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದಲ್ಲಿ ಮುಸ್ಲಿಮರಿಗೆ ಬಹುಪಾಲು ಇತರರಿಗೆ ಅಲ್ಪಪಾಲು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳುತತ್ವಕ್ಕೆ ಬಿಜೆಪಿ ಸದಾ ಬದ್ಧ, ಆದರೆ ಕಾಂಗ್ರೆಸ್ ಸರ್ಕಾರ "ಮುಸ್ಲಿಮರಿಗೆ ಬಹುಪಾಲು ಇತರರಿಗೆ ಅಲ್ಪಪಾಲು" ಎಂಬ ನೀತಿ ಅನುಸರಿಸಲು ಹೊರಟು ಕುವೆಂಪು ಅವರು ಕಲ್ಪಿಸಿದ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಅಪಚಾರವಾದರೂ ಸರಿ ನಾವು ಅಧಿಕಾರ ದಲ್ಲುಳಿಯಲು ಮುಸ್ಲಿಂ ಸಮುದಾಯವನ್ನು ಓಲೈಸುವುದೇ ನಮ್ಮ ಹೆಗ್ಗುರಿ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಬಂದುಬಿಟ್ಟಿದೆ. ಕರ್ನಾಟಕದಲ್ಲಿ ಗುತ್ತಿಗೆ ಕಾಮಗಾರಿ ಹಂಚುವಲ್ಲಿಯೂ ಶೇ.4 ಮೀಸಲಾತಿ ನಿಗದಿಪಡಿಸುವ ಮೂಲಕ ಸಮಾಜದಲ್ಲಿ ಒಡಕು ಮೂಡಿಸಿ, ಧರ್ಮಗಳ ನಡುವೆ ಬಿರುಕು ಮೂಡಿಸುವ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಕೈ ಹಾಕಿದೆ ಎಂದು ವಿಜಯೇಂದ್ರ ದೂರಿದ್ದಾರೆ.

ಮುಸ್ಲಿಮರಿಗಷ್ಟೇ ಮೀಸಲಾತಿ ನಿಗದಿಯಾಗಿದ್ದರೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವಲ್ಲ, ಕ್ರೈಸ್ತರು, ಜೈನ, ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ ಎಂದು ಹೇಳಿದ್ದಾರೆ. ಇದು 'ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ' ಎಂಬಂತೆ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ. ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರೂ ಸೇರಿದಂತೆ ಇತರ ಧಾರ್ಮಿಕ ಅಲ್ಪಸಂಖ್ಯಾತರೆಲ್ಲರಿಗೂ ಸಮಾನವಾಗಿ ಹಕ್ಕು, ಸವಲತ್ತುಗಳು ಹಂಚಿಕೆಯಾಗಬೇಕು, ಆದರೆ ಸಾಮಾಜಿಕ ನ್ಯಾಯದ ಬಗ್ಗೆ ಬೊಬ್ಬೆ ಹೊಡೆಯುವ ಕಾಂಗ್ರೆಸ್ ತನ್ನ ಆಡಳಿತದ ರಾಜ್ಯ ಸರ್ಕಾರದ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯವನ್ನು ಮೆಟ್ಟಿ ನಿಂತು ಮುಸ್ಲಿಂ ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವುದು ಸಂವಿಧಾನಕ್ಕೆ ದ್ರೋಹ ಬಗೆದಂತಾಗಿದೆ ಎಂದು ಅವರು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಪ್ರಗತಿಪರರೆಂದು ಸ್ವಯಂ ಬಿಂಬಿಸಿಕೊಂಡು ಕಾಂಗ್ರೆಸ್ ಓಲೈಸುವ ಚಿಂತಕರು, ಸಾಹಿತಿಗಳು ಇಂತಹ ಸಾಮಾಜಿಕ ಅನ್ಯಾಯ ಹಾಗೂ ಸಾಮರಸ್ಯ ಕದಡುವ ಸರ್ಕಾರದ ನಿಲುವನ್ನು ನೋಡಿಯೂ ಕಣ್ಣು, ಕಿವಿ ಮುಚ್ಚಿಕೊಂಡಿದ್ದಾರೆ. ಇವರ ದೃತರಾಷ್ಟ್ರ ಧೋರಣೆ ನಮ್ಮದೇನಿದ್ದರೂ ಕಾಂಗ್ರೆಸ್ ಪರವಾದ ನಿಲುವನ್ನು ಪ್ರತಿಪಾದಿಸುವುದು ಮಾತ್ರ , ಇದೆ ನಮ್ಮ ಪ್ರಗತಿಪರ ಚಿಂತನೆ ಹಾಗೂ ಹೋರಾಟ ಎಂದು ತಮ್ಮ ಅಸಲಿ ಮುಖವಾಡವನ್ನು ಅನಾವರಣ ಮಾಡಿಕೊಂಡಿದ್ದಾರೆ.

ಬಿಜೆಪಿ-ಕರ್ನಾಟಕಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ, ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ. ನಮ್ಮ ಹೋರಾಟಕ್ಕೆ ಸರ್ಕಾರ ಬಗ್ಗದಿದ್ದರೆ ಜನರ ಮುಂದೆ ಈ ಹೋರಾಟವನ್ನು ಕೊಂಡೊಯ್ಯುತ್ತೇವೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ