Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕುತಂತ್ರದಿಂದ ನಿಖಿಲ್‌ ಸೋಲು-ದೇವೇಗೌಡ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರದ ಗಮನ ಸೆಳೆದಿರುವ ಗೊಂಬೆನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಶಕ್ತಿ ಪ್ರದರ್ಶನದ ಮೂಲಕ ಎನ್‌ಡಿಎ ಬೆಂಬಲಿತ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ಕುಮಾರಸ್ವಾಮಿ ಶುಕ್ರವಾರ ಅಪಾರ ಜನಸ್ತೋಮದೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಗಲ್‌ಆಂಜನೇಯಸ್ವಾಮಿ ದೇವಾಲಯದಲ್ಲಿ ಪತ್ನಿ ರೇವತಿ ಹಾಗೂ ಪುತ್ರ ಸಹಿತ ವಿಶೇಷ ಪೂಜೆ ಸಲ್ಲಿಸಿದರು.


ಬಳಿಕ ಚನ್ನಪಟ್ಟಣದಲ್ಲಿ ಅದ್ದೂರಿ ರೋಡ್‌ಶೋ ನಡೆಸಿದರು.
ನಂತರ ತಹಶೀಲ್ದಾರ್‌ಕಚೇರಿಗೆ ತೆರಳಿ ಉಪ ಚುನಾವಣೆಯ ಚುನಾವಣಾಧಿಕಾರಿ ಹಾಗೂ ಚನ್ನಪಟ್ಟಣ ತಹಶೀಲ್ದಾರ್‌ಬಿನೋಯ್‌ಪಿ.ಕೆ. ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.


ಬೃಹತ್ ರ್ಯಾಲಿ-
ಚನ್ನಪಟ್ಟಣದಲ್ಲಿ ಸಹಸ್ರಾರು ಬಿಜೆಪಿ ಮತ್ತು ಜೆಡಿಎಸ್‌‍ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಬಿಜೆಪಿ ಮತ್ತು ಜೆಡಿಎಸ್‌‍ಎರಡು ಪಕ್ಷಗಳ ಕಾರ್ಯಕರ್ತರು, ಮುಖಂಡರು ಶಕ್ತಿ ಪ್ರದರ್ಶನ ಮಾಡಿ ಒಗ್ಗಟ್ಟು ಪ್ರದರ್ಶಿಸಿದರು. ರ್ಯಾಲಿ ಸಂದರ್ಭದಲ್ಲಿ ಕಿಲೋ ಮೀಟರ್‌ವರೆಗೂ ಜನವೋ ಜನರಿದ್ದ ದೃಶ್ಯ ಕಂಡುಬಂದಿತು.


ಕಾಂಗ್ರೆಸ್‌‍ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರು ಗುರುವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆಸಿದ ರೋಡ್‌ಶೋಗಿಂತ ನಿಖಿಲ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹೆಚ್ಚು ಜನರು ಇದ್ದದ್ದು ಕಂಡುಬಂದಿತು. ರೋಡ್‌ಶೋ ಉದ್ದಕ್ಕೂ ನಿಖಿಲ್‌ಕುಮಾರಸ್ವಾಮಿ ಹಾಗೂ ಉಭಯ ಪಕ್ಷಗಳ ಪರವಾಗಿ ಜಯಘೋಷಣೆಯನ್ನು ಕಾರ್ಯಕರ್ತರು ಕೂಗಿದರು. ಬಿಜೆಪಿ ಮತ್ತು ಜೆಡಿಎಸ್‌‍ಬಾವುಟಗಳನ್ನು ಹಿಡಿದ ಕಾರ್ಯಕರ್ತರು ಉತ್ಸಾಹದಿಂದ ಮುನ್ನಡೆಯುತ್ತಿದ್ದರು.

ತೆರೆದ ವಾಹನದಲ್ಲಿ ನಡೆದ ರೋಡ್‌ಶೋನಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಅವರೊಂದಿಗೆ ಹೆಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ, ಡಿ.ವಿ.ಸದಾನಂದಗೌಡ, ಸಂಸದರಾದ ಡಾ. ಸಿ. ಎನ್‌. ಮಂಜುನಾಥ್‌, ಮಲ್ಲೇಶ್‌ಬಾಬು, ಡಾ.ಕೆ.ಸುಧಾಕರ್‌, ಯದುವೀರ್‌ಕೃಷ್ಣ ದತ್ತ ಒಡೆಯರ್‌, ಜೆಡಿಎಸ್‌‍ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಶಾಸಕ ಎ.ಮಂಜು ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌ನ ಸ್ಥಳೀಯ ನಾಯಕರು ಭಾಗವಹಿಸಿದ್ದರು.

 ಈ ಸಂದರ್ಭದಲ್ಲಿ ಮಾತನಾಡಿದ ಉಭಯ ಪಕ್ಷಗಳ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಎನ್‌ಡಿಎ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚು ಮತಗಳನ್ನು ಗಳಿಸಿ ಜಯಗಳಿಸುತ್ತಾರೆ. ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಮತದಾರರ ಮನವೊಲಿಸಬೇಕು. ಮತದಾರರು ಈ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ಹೆಚ್‌.ಡಿ. ದೇವೇಗೌಡರು ಮಾತನಾಡಿ, ನಾವು ದೇವರಲ್ಲಿ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡಿದ್ದೇವೆ. ನಮ್ಮ ಇಡೀ ವಂಶ ಭಗವಂತನಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇವತ್ತು ಮೊಮ್ಮಗ ನಿಖಿಲ್‌ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಮೊದಲು ಪೂಜೆ ಕೈಂಕರ್ಯಗಳನ್ನು ಸಲ್ಲಿಸಿ, ಭಗವಂತನ ಆರ್ಶೀವಾದ ಪಡೆದಿದ್ದೇವೆ ಎಂದರು.

ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಜನರು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಸೌಹಾರ್ದತೆ ತಂದಿದ್ದಾರೆ. ಮೋದಿ ಅವರ ನಾಯಕತ್ವದಲ್ಲಿ ದೇಶದಲ್ಲಿ ಅಭಿವೃದ್ಧಿ ಆಗುತ್ತಿದೆ. ದೇಶದಲ್ಲಿ ಒಳ್ಳೆಯ ವಾತಾವರಣವಿದ್ದು, ಅದು ನಮಗೂ ಸಹಾಯವಾಗಲಿದೆ. ಸೋಲು, ಗೆಲುವು ಚುನಾವಣೆಯಲ್ಲಿ ಸಹಜ. ಇದು ಕಾರ್ಯಕರ್ತರ ಚುನಾವಣೆ. ಕಳೆದ ಬಾರಿ ಕಾಂಗ್ರೆಸ್‌‍ನ ಕುತಂತ್ರಿಗಳಿಂದ ನಿಖಿಲ್‌ಸೋತಿದ್ದಾರೆ. ಈ ಬಾರಿ ಕುತಂತ್ರಿಗಳ ಮಾತನ್ನು ಜನರು ಕೇಳುವುದಿಲ್ಲ. ನಿಖಿಲ್‌ಅವರನ್ನು ಗೆಲ್ಲಿಸುತ್ತಾರೆ.

ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್‌ಕುಮಾರಸ್ವಾಮಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು. ಭಗವಂತನ ಆಶೀರ್ವಾದದಿಂದ ಗೆಲುವು ಸಾಧಿಸುತ್ತೇವೆ ಎಂದು ಅವರು ಹೇಳಿದರು.

ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಮಾತನಾಡಿ, ದೇವರಿಗೆ ಪೂಜೆ ಸಲ್ಲಿಸಿ ಶುಭ ಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ತಾತ ದೇವೇಗೌಡರು, ತಂದೆ ಕುಮಾರಣ್ಣ, ಪತ್ನಿ ರೇವತಿ ಜೊತೆಗೂಡಿ ಪೂಜೆ ನೆರವೇರಿಸಿದ್ದೇವೆ. ನಮ್ಮ ಮೈತ್ರಿಗೆ ತೊಂದರೆ ಆಗದಂತೆ ನಾವು ಗೆಲ್ಲುತ್ತೆವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸ ಉಳಿಸುವ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ದೇವರಲ್ಲಿ ಪೂಜೆ ಮಾಡಿದ್ದೇನೆ. ನನ್ನ ಪರವಾಗಿ ಎರಡು ಪಕ್ಷದ ಕಾರ್ಯಕರ್ತರು ಅತೀ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ. ನನಗೆ ಸಂಪೂರ್ಣ ವಿಶ್ವಾಸವಿದ್ದು, ಚನ್ನಪಟ್ಟಣದಲ್ಲಿ ಒಬ್ಬ ಯುವಕನಿಗೆ ಕೆಲಸ ಮಾಡಲು ಜನರು ಅವಕಾಶ ನೀಡುತ್ತಾರೆ. ಕಾಂಗ್ರೆಸ್‌‍ಅಭ್ಯರ್ಥಿ ಯೋಗೇಶ್ವರ್‌ಬಗ್ಗೆ ನಾನು ಮಾತನಾಡಲ್ಲ. ಮುಂದಿನ ತಿಂಗಳು ಮತದಾರ ಪ್ರಭುಗಳು ನನಗೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿರುವುದಾಗಿ ಅವರು ಹೇಳಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ: ಹಿರಿಯ ಜೀವಗಳೊಂದಿಗೆ ಮಗುವಾದ ಸಂಭ್ರಮ!ಆತ್ರೇಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಅತಂತ್ರ ಭವಿಷ್ಯ: ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಬಿ.ಎಸ್.ಚಂದ್ರಶೇಖರ್ ಆಗ್ರಹಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶತನ್ನ ಪತ್ನಿಯನ್ನು ಆಕೆಯ ಇಚ್ಛೆಯಂತೆ ಪ್ರಿಯಕರನೊಡನೆ ಮದುವೆ ಮಾಡಿಸಿದ ವಿಶಾಲ ಹೃದಯದ ಪತಿ!ಪತ್ರಕರ್ತ ಜಿ. ಮಹಂತೇಶ್‌ಗೆ ಜೀವ ಬೆದರಿಕೆ ಪ್ರಕರಣ: ವಿಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಎಫ್‌ಐಆರ್ ದಾಖಲಿಸಿದ ನಂದಿನಿ ಲೇಔಟ್ ಪೊಲೀಸರುಜೈಲಿನಲ್ಲೂ ಮುಂದುವರಿದ ಪ್ರಜ್ವಲ್ ರೇವಣ್ಣ ವಿಕೃತಿ: ಸೆಲ್‌ನಲ್ಲೇ ಪೆನ್ ಡ್ರೈವ್ ಬಳಸಿ ಅಶ್ಲೀಲ ವೀಡಿಯೋ ವೀಕ್ಷಣೆ!ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶಭಾರತ-ಚೀನಾ ಸಂಬಂಧಕ್ಕೆ ಹೊಸ ಚೈತನ್ಯ: ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ಇಂಟರ್ನೆಟ್ ಇಲ್ಲದೆಯೂ ಯುಪಿಐ ಪಾವತಿ: ‘ಟ್ಯಾಪ್‌ಆ್ಯಂಡ್‌ಪೇ’ ಹಾಗೂ ‘ಮೈಯುಪಿಐ’ ಹೊಸ ಫೀಚರ್‌ಪರಿಚಯಿಸಿದ ಆರ್‌ಬಿಐನಮಗೆ ಹಾಕಿರುವ ಬೇಡಿ ಬಿಚ್ಚಿದರೆ ಕರ್ನಾಟಕವನ್ನೇ ಸ್ವಚ್ಛ ಮಾಡುತ್ತೇವೆ: ನ್ಯಾ. ಬಿ. ವೀರಪ್ಪ