Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಹುಲ್ ಗಾಂಧಿ ಸಮ್ಮುಖದಲ್ಲೇ ಪ್ರಧಾನಿ ಮೋದಿ, ಅವರ ದಿವಂಗತ ತಾಯಿಗೆ ಅಪಮಾನ: 'ನೈತಿಕ ದಿವಾಳಿತನ' ಎಂದು ವಾಗ್ದಾಳಿ!

​ ಚಂದ್ರವಳ್ಳಿ ನ್ಯೂಸ್, ​ನವದೆಹಲಿ:
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಿಮಿಕ್ರಿ ಮಾಡುವ ವೇಳೆ
, ಅವರ ದಿವಂಗತ ತಾಯಿಯವರನ್ನು ಅಣಕಿಸಿ ಅಪಮಾನ ಎಸಗಲಾಗಿದೆ ಎನ್ನಲಾದ ಘಟನೆ ಈಗ ದೇಶಾದ್ಯಂತ ತೀವ್ರ ರಾಜಕೀಯ ಸಂಚಲನ ಮೂಡಿಸಿದೆ. ಈ ಕೃತ್ಯವನ್ನು ಆಡಳಿತಾರೂಢ ಬಿಜೆಪಿ ಉಗ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ನಾಯಕರ ನೈತಿಕತೆಯನ್ನು ಪ್ರಶ್ನಿಸಿದೆ.

​ಘಟನೆಯ ಹಿನ್ನೆಲೆ: ​ಮಧ್ಯಪ್ರದೇಶದ ಇಂದೋರ್‌ನಲ್ಲಿ ಆಯೋಜಿಸಲಾಗಿದ್ದ ‘ಛಾತ್ರೋನ್ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದ ಪುಲ್ಕಿತ್ ಮಣಿ ಎಂಬುವವರು ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಪ್ರಧಾನಿ ಮೋದಿಯವರ ಧ್ವನಿ ಹಾಗೂ ಮಾತನಾಡುವ ಶೈಲಿಯನ್ನು ಅನುಕರಿಸುತ್ತಾ, ಅವರ ದಿವಂಗತ ತಾಯಿಯವರ ಕುರಿತು ವ್ಯಂಗ್ಯದ ಮಾತುಗಳನ್ನಾಡಿದ್ದಾರೆ. ವೇದಿಕೆಯ ಮುಂಭಾಗದಲ್ಲೇ ಕುಳಿತಿದ್ದ ರಾಹುಲ್ ಗಾಂಧಿ ಅವರು ಈ ಪ್ರದರ್ಶನವನ್ನು ನೋಡಿ ನಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Advertisement

​​'ಅಸಭ್ಯ ಸಂಸ್ಕೃತಿಯ ಪ್ರತಿಫಲನ' – ಸಿ.ಆರ್. ಕೇಶವನ್:
ಬಿಜೆಪಿ ವಕ್ತಾರ ಸಿ.ಆರ್. ಕೇಶವನ್ ಮಾತನಾಡಿ
, "ಪ್ರಧಾನಿ ಹಾಗೂ ಅವರ ದಿವಂಗತ ತಾಯಿಯನ್ನು ಸಾರ್ವಜನಿಕವಾಗಿ ಅವಮಾನಿಸುತ್ತಿದ್ದರೂ ಅದನ್ನು ತಡೆಯುವ ಬದಲು ರಾಹುಲ್ ಗಾಂಧಿ ನಗುತ್ತಾ ಆನಂದಿಸುತ್ತಿರುವುದು ಅವರ ಅಸಭ್ಯ ಸಂಸ್ಕೃತಿಯನ್ನು ತೋರಿಸುತ್ತದೆ. ಪ್ರಧಾನಿ ಮೋದಿ ವಯೋವೃದ್ಧ ಮಹಿಳೆಯರಿಗೆ ಗೌರವ ಕೊಟ್ಟು ಕುರ್ಚಿ ಒದಗಿಸುವ ಕಾಳಜಿ ತೋರಿಸಿದರೆ, ರಾಹುಲ್ ಗಾಂಧಿ ವೃದ್ಧರನ್ನು ಈ ರೀತಿ ಅವಮಾನಿಸುವುದನ್ನು ಸಂಭ್ರಮಿಸುತ್ತಿದ್ದಾರೆ," ಎಂದು ಕಿಡಿಕಾರಿದ್ದಾರೆ.

​'ನೈತಿಕ ದಿವಾಳಿತನದ ಪರಮಾವಧಿ' – ಪ್ರಹ್ಲಾದ್ ಜೋಶಿ:
ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಮಾಜಿಕ ಜಾಲತಾಣ
'ಎಕ್ಸ್'ನಲ್ಲಿ ಪೋಸ್ಟ್ ಮಾಡಿ, "ವಿದ್ಯಾರ್ಥಿಗಳೊಂದಿಗಿನ ಸಂವಾದದ ವೇದಿಕೆಯನ್ನು ಪ್ರಧಾನಿ ಮೋದಿಯವರ ದಿವಂಗತ ತಾಯಿಯನ್ನು ನಿಂದಿಸಲು ಬಳಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ನೈತಿಕ ದಿವಾಳಿತನದ ಹಂತಕ್ಕೆ ತಲುಪಿದ್ದಾರೆ," ಎಂದು ಆಕ್ರೋಶ ಹೊರಹಾಕಿದ್ದಾರೆ.

​'ತಾಯಿ ರಾಜಕೀಯದ ವಿಷಯವಲ್ಲ' – ಪುಷ್ಕರ್ ಸಿಂಗ್ ಧಾಮಿ:
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯನ್ನು ಖಂಡಿಸಿ
, ರಾಜಕೀಯ ಭಿನ್ನಾಭಿಪ್ರಾಯಗಳ ಏನೇ ಇದ್ದರೂ 'ತಾಯಿ'ಯಂತಹ ಪವಿತ್ರ ಭಾವನೆಯನ್ನು ರಾಜಕೀಯಕ್ಕೆ ಎಳೆದು ತರುವುದು ಸಂಪೂರ್ಣವಾಗಿ ತಪ್ಪು ಎಂದು ಹೇಳಿದ್ದಾರೆ.

​ಈ ಘಟನೆಯು ಮೋದಿ ಅವರ ‘ಮೌಲ್ಯಗಳ ರಾಜಕೀಯ’ ಹಾಗೂ ರಾಹುಲ್ ಗಾಂಧಿ ಅವರ ‘ತೋರಿಕೆಯ ರಾಜಕೀಯ’ದ ನಡುವಿನ ವ್ಯತ್ಯಾಸವನ್ನು ಎತ್ತಿಹಿಡಿದಿದೆ ಎಂದು ರಾಷ್ಟ್ರೀಯ ಬಿಜೆಪಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ