Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಂಬಾಪುರಿ ಸ್ವಾಮಿಗಳ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮೇ ತಿಂಗಳ
25ರಂದು ಇಷ್ಟಲಿಂಗ ಮಹಾಪೂಜೆ ಹಾಗೂ ಭಾವೈಕ್ಯ ಧರ್ಮಸಮಾರಂಭವನ್ನು ಬಾಳೆಹೊನ್ನೂರು ಶ್ರೀಮದ್ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಲಾಗಿದೆ ಎಂದುತಾಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಘಟಕದ ಅಧ್ಯಕ್ಷ ಲೋಕೇಶ್ ನಾಗಸಂದ್ರ ತಿಳಿಸಿದರು.

 ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ವೀರಶೈವ ಲಿಂಗಾಯತ ಸಮಾಜ (ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ) ವತಿಯಿಂದ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ 25ರಂದು ಬೆಳಗ್ಗೆ 7-00 ಗಂಟೆಗೆ ಗುರುವರ್ಯರಿಂದ  ಶಿವಧೀಕ್ಷೆ ನೀಡುವ ಮೂಲಕ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಬೆಳಗ್ಗೆ 8 ಗಂಟೆಗೆ ಪೂರ್ಣ ಕುಂಭ ಸಹಿತ ಮಂಗಳವಾದ್ಯಗಳೊಂದಿಗೆ ನಗರದ ಸೋಮೇಶ್ವರ ದೇವಾಲಯದಿಂದ ಪಾದಯಾತ್ರೆ ಮೂಲಕ ರಂಭಾಪುರಿ ಜಗದ್ಗುರುಗಳು ಬಸವ ಭವನಕ್ಕೆ ಆಗಮಿಸಲಿದ್ದಾರೆ, ಬೆಳಿಗ್ಗೆ 9 ಗಂಟೆಗೆ ಇಷ್ಟಲಿಂಗ ಮಹಾಪೂಜೆ ಪ್ರಾರಂಭವಾಗಲಿದೆ ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಸುಜಯ್ ಕುಮಾರ್ ಮಾತನಾಡಿ ನಮ್ಮ ತಾಲ್ಲೂಕಿನಲ್ಲಿ ಸಾಮೂಹಿಕ ಶಿವಧೀಕ್ಷೆ, ಇಷ್ಟಲಿಂಗ ಮಹಾಪೂಜೆ ಜೊತೆಗೆ ಭಾವೈಕ್ಯ ಧರ್ಮ ಸಮಾರಂಭ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬಾಳೆ ಹೊನ್ನೂರು ಮಠದ ಶ್ರೀ ಷ.ಬ್ರ.ರೇಣುಕ ಶಿವಾಚಾರ್ಯ ಸ್ವಾಮಿಗಳು, ಷ. ಬ್ರ. ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ  ಬಿ. ಈಶ್ವರಖಂಡ್ರೆ, ಭಾರತೀಯ ಜನತಾ ಪಾರ್ಟಿ,ರಾಜ್ಯಾಧ್ಯಕ್ಷ 

ಬಿ.ವೈ. ವಿಜಯೇಂದ್ರ, ಸಂಸದ ಡಾ. ಕೆ. ಸುಧಾಕರ್‌ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

 ವಿಶೇಷ ಸೂಚನೆ : ತಾಲ್ಲೂಕಿನ ಜನತೆ ಗುರುವರ್ಯರಿಂದ ಶಿವಧೀಕ್ಷೆ ಪಡೆಯಲು ಇಚ್ಛಿಸುವವರು ಮೋಹನ್ ಕುಮಾರ್ : 9242042361 ಹಾಗೂ ಸುಜಯ್ ಕುಮಾರ್ : 9686456222 ರವರನ್ನು ಸಂಪರ್ಕಿಸಲು ಕೋರಿದೆ.

ಸುದ್ದಿಗೊಷ್ಟಿಯಲ್ಲಿಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಗ್ರಾಮಾಂತರ ಯುವ ಘಟಕ ಜಿಲ್ಲಾಧ್ಯಕ್ಷ ಲೋಕೇಶ್ ನಾಗಸಂದ್ರ, ಜಿಲ್ಲಾ ನಿರ್ದೇಶಕರಾದ ಪ್ರಭಾಕರ್,ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಸುಜಯ್ ಕುಮಾರ್ , ಖಜಾಂಚಿ ವೀರಣ್ಣ,ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ