LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರದ ಸ್ವಚ್ಛತೆ ದೃಷ್ಟಿಯಿಂದ ಕಸದ ಸ್ಥಳಗಳನ್ನು ನಗರಸಭೆ ವತಿಯಿಂದ ಸ್ವಚ್ಛತಾ ಆಂದೋಲನ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಸ್ವಚ್ಛತಾ ದೃಷ್ಟಿಯಿಂದ ಹೊಸ ಘನತಾಜ್ಯ ನಿರ್ವಹಣಾ ನಿಯಮಗಳು -2026 ಅನ್ವಯದಂತೆ  ನಗರದೆಲ್ಲೆಡೆ ನಾಗರಿಕರು ಎಲ್ಲೆಂದರಲ್ಲಿ ಕಸ ಬಿಸಾಡುವ ಹಲವಾರು ಜಾಗಗಳನ್ನು ಗುರ್ತಿಸಿ ಹಂತ ಹಂತವಾಗಿ ಕಸದ ಸ್ಥಳಗಳನ್ನು ನಗರಸಭೆ ವತಿಯಿಂದ ಸ್ವಚ್ಛ ಗೊಳಿಸಿ ಕಸ ಹಾಕದಂತೆ ನಾಗರಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.

ಅದರನ್ವಯ ವಾರ್ಡ್ ನಂ-3  ಮುತ್ಸದ್ರ ಟಿಬಿ ಕ್ರಾಸ್ ಬಳಿ ಸುಮಾರು ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕರು ಈ ಸ್ಥಳದಲ್ಲಿ ಅಜಾಗರೂಕತೆಯಿಂದ ಕಸವನ್ನು ಎಸೆಯುತಿದ್ದರು. ಇದರಿಂದ ವಾರ್ಡಿನ ಸೌಂದರ್ಯಕ್ಕೂ ಹಾಗೂ  ಸಾರ್ವಜನಿಕರ ಆರೋಗ್ಯದ ಮೇಲೆ ಹಾನಿ ಉಂಟು ಮಾಡುತ್ತಿತ್ತು. ಪೌರಾಯುಕ್ತರ ಆದೇಶದಂತೆ ಈ ಸ್ಥಳವನ್ನು ಗುರುತಿಸಿ ಸ್ವಚ್ಛ ಸ್ಥಳವನ್ನಾಗಿ ಮಾಡುವ ಮಹತ್ವದ ಕಾರ್ಯ ಕ್ಯೆಗೊಳ್ಳಲಾಗಿದೆ.

ಈ ಬ್ಯುಟಿಫಿಕೇಶನ್ ಸ್ಥಳದಲ್ಲಿ ಸುಂದರವಾದ ಚಿತ್ರಕಲೆ,ಹಸಿರು ಗಿಡ ನೆಡುವ ಹಾಗೂ ಸ್ವಚ್ಛತಾ ಸಂದೇಶ ನೀಡುವ ಹಾಗೂ ವಿನ್ಯಾಸಗಳನ್ನು ಅಳವಡಿಸಲಾಗಿದೆ. ಇದರಿಂದ ಕಸ ಹಾಕುತಿದ್ದ ಈ ಜಾಗದಲ್ಲಿ ಸುಂದರ ಹಾಗೂ ಆಕರ್ಷಕ ಸ್ಥಳವಾಗಿ ಮಾರ್ಪಟ್ಟಿದೆ.

ಈ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಿಲ್ಲಾಧಿಕಾರಿ ಅನುರಾಧ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ನಗರ ಅಭಿವೃದ್ಧಿ ಇಲಾಖೆಯ ಯೋಜನಾ ಅಧಿಕಾರಿಗಳು, ಪೌರಾಯುಕ್ತರು, ಹಾಗೂ ನಗರಸಭೆ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು