Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
35
ಬಿಲಿಯನ್ ಡಾಲರ್ ಹೂಡಿಕೆ| 15 ಮಿಲಿಯನ್ ಸಣ್ಣ ಉದ್ಯಮಗಳಿಗೆ ನೆರವು | ಲಕ್ಷಾಂತರ ಉದ್ಯೋಗಗಳ ಸೃಷ್ಟಿ!ಗೆ ಅವಕಾಶ ಕಲ್ಪಿಸಲಿರುವ ಅಮೆಜಾನ್ ಕಂಪನಿಯ ಕಾರ್ಪೋರೇಟ್ ಕಚೇರಿಯನ್ನು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಉದ್ಘಾಟಿಸಿದರು.

ಅಮೆಜಾನ್ ಕಂಪನಿಯು ಯಲಹಂಕ ಸಮೀಪದಲ್ಲಿ ನಿರ್ಮಿಸಿರುವ, 11 ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದಲ್ಲಿ ಇದು ಅಮೆಜಾನ್ ಕಂಪನಿಯ 10ನೆಯ ಕಾರ್ಪೊರೇಟ್ ಕಚೇರಿಯಾಗಿದೆ.

ರಾಜ್ಯದೊಂದಿಗೆ ಎರಡು ದಶಕಗಳ ಬಾಂಧವ್ಯ ಹೊಂದಿರುವ ಕಂಪನಿಯು ಮುಂದಿನ 4 ವರ್ಷಗಳಲ್ಲಿ ಭಾರತದಲ್ಲಿ 35 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ 15 ಮಿಲಿಯನ್ ಸಣ್ಣ ಉದ್ಯಮಗಳಿಗೆ ನೆರವು ಸಿಗಲಿದ್ದು, ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಲ್ಲಿ ರಾಜ್ಯಕ್ಕೆ ಗಮನಾರ್ಹ ಪಾಲು ಹರಿದು ಬರಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯವು 3.80 ಲಕ್ಷ ರೂ.ಗಳಿಗಿಂತ ಹೆಚ್ಚು ತಲಾ ಆದಾಯ ಹೊಂದಿದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ಜೊತೆಗೆ, ದೇಶದ ಬೊಕ್ಕಸಕ್ಕೆ ವಾರ್ಷಿಕ 1.6 ಲಕ್ಷ ಕೋಟಿ ರೂ. ಜಿ.ಎಸ್.ಟಿ ಪಾವತಿ ಮೂಲಕ ದ್ವಿತೀಯ ಸ್ಥಾನದಲ್ಲಿದ್ದೇವೆ. ನಾವೀನ್ಯತಾ ಸೂಚ್ಯಂಕದಲ್ಲಿ ಬೆಂಗಳೂರು ಜಾಗತಿಕ ಸ್ತರದಲ್ಲಿ 21ನೇ ಸ್ಥಾನಕ್ಕೆ ಜಿಗಿದಿದೆ. ಟೆಕ್-ಸಿಟಿ ಸೂಚ್ಯಂಕದಲ್ಲಿ ಮೊದಲ 30 ಸ್ಥಾನಗಳ ಒಳಗೆ ಕಾಣಿಸಿಕೊಂಡಿರುವ ದೇಶದ ಏಕೈಕ ನಗರ ಬೆಂಗಳೂರಾಗಿದೆ.

ಕಳೆದ ವರ್ಷ ಬೆಂಗಳೂರಿನಲ್ಲಿ 14.6 ಮಿಲಿಯನ್ ಚದರ ಅಡಿ ಜಾಗವನ್ನು ಕೈಗಾರಿಕಾ ವಹಿವಾಟು ಉದ್ದೇಶಕ್ಕೆ ಭೋಗ್ಯಕ್ಕೆ ನೀಡಿದ್ದು, ನಾವು ಪ್ರಥಮ ಸ್ಥಾನದಲ್ಲಿದ್ದೇವೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಒಟ್ಟು 900 ಜಿಸಿಸಿ ಕೇಂದ್ರಗಳಿದ್ದು, ಇವುಗಳ ಪೈಕಿ ಶೇ.35ರಷ್ಟು ಕರ್ನಾಟಕದಲ್ಲೇ ಇವೆ. ಇ-ಕಾಮರ್ಸ್ ವಹಿವಾಟಿಗೆ ಬೇಕಾದ ಮೂಲಸೌಕರ್ಯದಲ್ಲೂ ರಾಜ್ಯವು ಮೊದಲ ಸ್ಥಾನದಲ್ಲಿದೆ.

ನಮ್ಮಲ್ಲಿ 42.48 ಲಕ್ಷ ಟನ್ ದಾಸ್ತಾನು ಸಂಗ್ರಹಿಸುವಷ್ಟು ಉಗ್ರಾಣಗಳು ಮತ್ತು 233 ಶೀತಲಗೃಹಗಳಿವೆ. ಇದಕ್ಕೆ ತಕ್ಕಂತೆ ಇ-ಕಾಮರ್ಸ್ ವಹಿವಾಟು ಶೇ.11ರಷ್ಟು ಬೆಳವಣಿಗೆ ಸಾಧಿಸುತ್ತಿದೆ.

ಅಮೆಜಾನ್ ಮತ್ತು ಜಾಗತಿಕ ಮಟ್ಟದ ಇತರ ಕಂಪನಿಗಳು ರಾಜ್ಯದಲ್ಲಿರುವ ಈ ಕೈಗಾರಿಕಾಸ್ನೇಹಿ ಕಾರ್ಯಪರಿಸರದ ಲಾಭವನ್ನು ಪಡೆದುಕೊಂಡು ಹೆಚ್ಚುಹೆಚ್ಚು ಹೂಡಿಕೆ ಮಾಡಬೇಕು. ಜತೆಗೆ ಇಲ್ಲೇ ಉತ್ಪಾದನೆ ಮಾಡಿ, ಜಗತ್ತಿನ ವಿವಿಧ ದೇಶಗಳಿಗೆ ರಫ್ತು ಮಾಡುವ ಮೂಲಕ ಕರ್ನಾಟಕವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಮೆಜಾನ್ ಕಂಪನಿಯ ಜಾಗತಿಕ ವ್ಯವಹಾರಗಳ ವಿಭಾಗದ ಮುಖ್ಯಸ್ಥ ಡೇವಿಡ್ ಝಪೊಲೋಸ್ಕಿ, ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ, ಉಪಾಧ್ಯಕ್ಷ ಸಮೀರ್ ಕುಮಾರ್, ಜಾಗತಿಕ ಆಸ್ತಿಪಾಸ್ತಿಗಳ ವಿಭಾಗದ ಉಪಾಧ್ಯಕ್ಷ ಸೀನ್ ಲೀ ಮುಂತಾದವರು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು