LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸಗೊಬ್ಬರ ವಿತರಣಾ ಆಪ್ ಉದ್ಘಾಟನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು:
ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರಂ ಹಾಗೂ ಹಿರಿಯೂರು ಕೃಷಿ ಇಲಾಖೆಯ ಜಂಟಿ ಆಶ್ರಯದಲ್ಲಿ ರೈತರು ಮತ್ತು ರೈತ ಮಹಿಳೆಯರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 'ಫ್ರೇಮ್ ವರ್ಕ್ ಫಾರ್ ಫರ್ಟಿಲೈಸರ್ ಸೇಲ್'ತಂತ್ರಾಂಶ ಆಧಾರಿತ ರಸಗೊಬ್ಬರ ವಿತರಣಾ ಆಪ್ ಉದ್ಘಾಟನೆ 'ಖೇತಿ ಬಚಾವ್ ಆಂದೋಲನ' ಹಾಗೂ 'ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸಮತೋಲನ ಪೋಷಕಾಂಶಗಳ ನಿರ್ವಹಣೆ' ಕುರಿತು ಒಂದು ದಿನದ ತರಬೇತಿಯನ್ನು ನೀಡಲಾಯಿತು.

​​ಈ ಉಪಯುಕ್ತ ಕಾರ್ಯಾಗಾರವನ್ನು ಪ್ರಮುಖ ಗಣ್ಯರು ಜಂಟಿಯಾಗಿ ದೀಪ ಬೆಳಗುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

​ತಾಲೂಕು ದಂಡಾಧಿಕಾರಿ ಸಿದ್ದೇಶ್ ಎಂ, ಚಳ್ಳಕೆರೆ ವಿಭಾಗದ ಉಪ ಕೃಷಿ ನಿರ್ದೇಶಕ ಉಮೇಶ್ ಡಿ, ಹಿರಿಯೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ಜೆ, ರಾಜ್ಯ ರೈತ ಸಂಘದ ಉಪಾಧ್ಯಕ್ಷ ಹೊರಕೇರಪ್ಪ, ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಗಡಾರಿ ಕೃಷ್ಣಪ್ಪ, ರೈತ ಸಂಘದ ತಾಲೂಕು ಅಧ್ಯಕ್ಷ ಶಿವಕುಮಾರ್, ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಹರ್ಷ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಜಗದೀಶ್ ಕಂದಿಕೆರೆ,  ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ ಆರ್ ಸೇರಿದಂತೆ ಮತ್ತಿತರರು ಇದ್ದರು.​

​ರೈತರಿಗೆ ತಂತ್ರಜ್ಞಾನ ಆಧಾರಿತ ರಸಗೊಬ್ಬರ ವಿತರಣೆಯ ವ್ಯವಸ್ಥೆಯನ್ನು ಪರಿಚಯಿಸುವುದು ಹಾಗೂ ಬೆಳೆಗಳಲ್ಲಿ ಪೋಷಕಾಂಶಗಳ ಸಮತೋಲನ ಕಾಯ್ದುಕೊಳ್ಳುವ ಮೂಲಕ ಉತ್ತಮ ಇಳುವರಿ ಪಡೆಯಲು ಈ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಯಿತು. ಸ್ಥಳೀಯ ಭಾಗದ ನೂರಾರು ರೈತರು ಮತ್ತು ರೈತ ಮಹಿಳೆಯರು ಈ ತರಬೇತಿಯ ಸದುಪಯೋಗ ಪಡೆದುಕೊಂಡರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು