Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಲ್ಲಿ ಬದುಕುತ್ತಿರುವುದರಿಂದ ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕೆಂದು ಮಹಾರಾಜ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರೊ.ಗಂಗಮ್ಮ ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯ, ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ, ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಜಾಲಿಕಟ್ಟೆಯಲ್ಲಿ ಏ. ೨೮ ರವರೆಗೆ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಚಿಕ್ಕವರಿಂದ ಹಿಡಿದು ದೊಡ್ಡವರತನಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸಾಮಾನ್ಯವಾಗಿದೆ. ಈ ನಿಟ್ಟಿನಲ್ಲಿ ಬಸವೇಶ್ವರ ಆಸ್ಪತ್ರೆಯ ವೈದ್ಯರುಗಳು ಉಚಿತ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೊ.ಗಂಗಮ್ಮ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಮೂಲಕ ಮಕ್ಕಳಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲಾಗುವುದಲ್ಲದೆ ಗ್ರಾಮಸ್ಥರು ಮನೆ ಹಾಗೂ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿಟ್ಟುಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಹೇಳಿದರು.

ಮಹಾರಾಜ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ.ಶ್ರೀನಿವಾಸ ಎನ್. ಪ್ರೊ.ಓಂಕಾರಮೂರ್ತಿ, ಉಪನ್ಯಾಸಕರುಗಳಾದ ಸ್ವರೂಪ ಕೆ. ದಾದಾಪೀರ್ ಹಾಗೂ ಬಸವೇಶ್ವರ ಆಸ್ಪತ್ರೆಯ ವೈದ್ಯರುಗಳಾದ ಕಾರ್ತಿಕ್, ಅಭಿನಯ್, ಶ್ರೇಣಿ, ಪ್ರಿಯಾಂಕ, ರೂಪೇಶ್‌ರೆಡ್ಡಿ, ಶೃತಿ ಇವರುಗಳು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ