Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೆಬ್ರವರಿ 4 ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ

Advertisement
ಚಂದ್ರವಳ್ಳಿ ನ್ಯೂಸ್, ವಿಜಯಪುರ:
ಬಸವನಬಾಗೇವಾಡಿಯಲ್ಲಿ ಫೆಬ್ರವರಿ 4 ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮುಹೂರ್ತ ಫಿಕ್ಸ್ ಆಗಿದ್ದು
, ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮುಂದಾಗಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1008 ಸಾಧು ಸಂತರ ಪಾದ ಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ. 1 ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ಈಶ್ವರಪ್ಪ ತಿಳಿಸಿದರು.
ಕ್ರಾಂತಿವೀರ ಬ್ರಿಗೇಡ್ ಅನ್ನು ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ‌ಸ್ವಾಮೀಜಿ ‌ಉದ್ಘಾಟನೆ ಮಾಡುತ್ತಾರೆ ಎಂದು ತಿಳಿಸಿದರು.


ಇದೇ ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ಈಶ್ವರಪ್ಪ ತಿಳಿಸಿದರು. ಹಿಂದೂ ಸಮಾಜದ ಪರ, ಹಿಂದುಳಿದ ವರ್ಗದ ಸ್ವಾಮೀಜಿಗಳ ಪರ ಬ್ರಿಗೇಡ್ ಕೆಲಸ ಮಾಡಲಿದೆ. ಬ್ರಿಗೇಡ್ ಸ್ಥಾಪನೆ ಮಾಡುವುದಕ್ಕೆ ಮುಖ್ಯ ಉದ್ದೇಶ ಹಿಂದುಳಿದ ಮಠಗಳ ಅಭಿವೃದ್ಧಿ. ಹಿಂದೂಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ರಾಜಕಾರಣದ ಜೊತೆ ಜೊತೆಗೆ ನಾನು ಸಾಧು ಸಂತರ ಸೇವೆ, ಧಾರ್ಮಿಕ ಕಾರ್ಯ ಮಾಡುತ್ತಿದ್ದೇನೆ. ಈ‌ಹಿಂದೆ ಮಠ ಮಂದಿರಗಳಿಗೆ ಹಣ ನೀಡುವಂತೆ ಮಾಡಿದ್ದು ನಾನೇ. ಹೀಗಾಗಿ ನಾನು ಧಾರ್ಮಿಕ ಕೆಲಸ ಮಾಡುತ್ತಿದ್ದೇನೆ ಎಂದು ಈಶ್ವರಪ್ಪ ತಿಳಿಸಿದರು.

ಆರೋಪ‌ಬಂದಾಗ ರಾಜೀನಾಮೆ ನೀಡಿದ್ದೆ-
ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ವಿಚಾರವಾಗಿ ಮಾತನಾಡಿದ ಅವರು
, ನನ್ನ ವಿರುದ್ಧ ಆರೋಪ‌ಬಂದಾಗ ಕೂಡಲೇ ರಾಜೀನಾಮೆ ನೀಡಿದ್ದೆ. ಆರ್‌ಎಸ್‌ಎಸ್‌ನಿಂದ ಬೆಳೆದು ಬಂದವನು ನಾನು. ಅಂದು ಕೆಲವರು ನನ್ನ ವಿರುದ್ಧ ರಾಜಕೀಯ ಮಾಡಿದರು. ಅವರು ಈಗ ಅನುಭವಿಸುತ್ತಿದ್ದಾರೆ. ನನ್ನ ವಿರುದ್ಧ ಕೆಲಸ ಮಾಡಿದವರು ಯಾರೆಂದು ಸಮಯ ಬಂದಾಗ ಗೊತ್ತಾಗುತ್ತೆ ಎಂದು ಮಾರ್ಮಿಕವಾಗಿ ಈಶ್ವರಪ್ಪ ತಿಳಿಸಿದರು.

ನನ್ನ‌ವಿರುದ್ಧ ಕೆಲಸ ಮಾಡಿದವರಿಗೆ ದೇವರೇ ಉತ್ತರ ನೀಡುತ್ತಿದ್ದಾನೆ. ನನ್ನ ವಿರುದ್ಧ ಕೆಲಸ ಮಾಡಿದವರು ಯಾರು, ಯಾವ ಪಕ್ಷದವರು ಅನ್ನೋದು ಸಮಯ ಬಂದಾಗ ಗೊತ್ತಾಗುತ್ತೆ ಎಂದು ಈಶ್ವರಪ್ಪ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ