ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಇಲ್ಲಿನ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ 'ಎನ್.ಡಿ.ಆರ್.ಎಫ್. (ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ) ತರಬೇತಿ ಕಾರ್ಯಾಗಾರ'ವನ್ನು ಜಿಲ್ಲಾ ಸಹಾಯಕ ಆಯುಕ್ತ ಕಿರಣ್ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು.
ವಿಪತ್ತು ನಿರ್ವಹಣೆ ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ಒಟ್ಟು 187 ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ತರಬೇತಿ ಪಡೆದುಕೊಂಡರು.
ಸಮಾರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳಾದ ನಾಗರಾಜ್, ದೇವರಾಜ್ ಮೂರ್ತಿ, ಭೀಮಣ್ಣ, ಧನಲಕ್ಷ್ಮಿ, ಭಾಗ್ಯಲಕ್ಷ್ಮಿ, ರಾಜ್ಯ ಪರಿಷತ್ ಸದಸ್ಯ ಬಸವರಾಜ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೋಟಿಲಿಂಗಯ್ಯ, ಶಿಕ್ಷಕರಾದ ಬಸವರಾಜ್, ವೆಂಕಟೇಶ್, ಹಸೀನಾ, ಕ್ಲಾರ ಹಾಗೂ ಚಿದಾನಂದ್. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ವಿಪತ್ತಿನ ಸಮಯದಲ್ಲಿ ಜೀವ ರಕ್ಷಣೆ ಮಾಡುವುದು ಹೇಗೆ ಎಂಬ ಬಗ್ಗೆ ಸದ್ಧಾಂತಿಕ ಹಾಗೂ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು.



