LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ಮಕ್ಕಳಿಂದಲೇ ನೂತನ ಕೊಠಡಿಗಳ ಉದ್ಘಾಟನೆ; ಭಾವುಕರಾದ ಹೆಚ್.ಡಿ. ಕುಮಾರಸ್ವಾಮಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಮಂಡ್ಯ: 
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಹಳ್ಳಿ ಗ್ರಾಮದ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭವು ಅತ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ನೆರವೇರಿತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ
, ಶಾಲೆಯ ಮುದ್ದು ಮಕ್ಕಳೇ ರಿಬ್ಬನ್ ಕತ್ತರಿಸುವ ಮೂಲಕ ನೂತನ ಕೊಠಡಿಗಳನ್ನು ಉದ್ಘಾಟಿಸಿದ್ದು ವಿಶೇಷವಾಗಿತ್ತು.

​ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, "ನನ್ನ ಪಾಲಿಗೆ ಇದು ಅವಿಸ್ಮರಣೀಯ ಕ್ಷಣ. ಶಾಲೆಯ ಮುದ್ದು ಮಕ್ಕಳಿಂದಲೇ ನೂತನ ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಿಸಿದ್ದು ಅತೀವ ಸಂತೋಷ ಉಂಟು ಮಾಡಿದೆ," ಎಂದು ಭಾವುಕರಾಗಿ ನುಡಿದಿದ್ದಾರೆ.

​​ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಮಿಚಿಲಿನ್ ಇಂಡಿಯಾ ಪ್ರೈವೇಟ್ ಕಂಪನಿಯ ನಿರ್ದೇಶಕ ಸಿದ್ದಾರ್ಥ ಪ್ರಸಾದ್.(ಸಿಎಸ್ಆರ್ ನಿಧಿಯ ಮೂಲಕ ಶಾಲಾ ಕೋಣೆಗಳ ನಿರ್ಮಾಣಕ್ಕೆ ನೆರವು ನೀಡಿದ ಸಂಸ್ಥೆ), ಶಾಸಕ ​ಮಂಜುನಾಥ್ ಸೇರಿದಂತೆ ಗ್ರಾಮಸ್ಥರು, ಶಾಲೆಯ ಶಿಕ್ಷಕ ವೃಂದ ಹಾಗೂ ಜನತಾದಳ (ಜಾತ್ಯತೀತ) ಪಕ್ಷದ ಹಲವಾರು ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಮಕ್ಕಳ ಕೈಯಿಂದಲೇ ಉದ್ಘಾಟನೆ ಮಾಡಿಸಿದ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ