Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಜಿಲ್ಲಾ ಕಲಾ ಭವನ ಲೋಕಾರ್ಪಣೆ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕಲೆ ಹಾಗೂ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ದೊರೆತಾಗ ಮಾತ್ರ ನಮ್ಮ ಸಾಂಸ್ಕೃತಿಕ ಕಲೆಗಳು ಜೀವಂತಿಕೆ ಪಡೆಯಲು ಸಾಧ್ಯ ನೈಜ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ವಿವಿಧ  ಯೋಜನೆಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಕಲಾವಿದರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂಧಿಸಲಾಗುವುದು ಎಂದು ಆಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.


ನಗರದ ಹೊರವಲಯದ ಮುದ್ದನಾಯಕನಪಾಳ್ಯದ ಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದಿಂದ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಕಲಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆಧುನಿಕತೆಯ ಭರಾಟೆಯಲ್ಲಿ ಪಾರಂಪರಿಕ ಕಲಾ ಚಟುವಟಿಕೆಗಳು ಮರೆಯಾಗುತ್ತಿದ್ದು, ಎಂದು ಹಿರಿಯ ಹಾಗೂ ಅಶಕ್ತ ಕಲಾವಿದರಿಗೆ ಸರ್ಕಾರದಿಂದಲೂ ಅನೇಕ ಯೋಜನೆಗಳ ಮೂಲಕ ನೆರವು ದೊರೆಯುತ್ತಿದೆ. ನೈಜ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅನೇಕ ಯೋಜನೆಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಕಲಾವಿದರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ಕಾಲ ಬದಲಾದಂತೆ ಕಲೆಯ ಮಾದರಿಗಳು ಬದಲಾಗುತ್ತಿವೆ. ಚಲನಚಿತ್ರರಂಗದ ಭರಾಟೆಯಲ್ಲಿ ರಂಗ ಕಲೆ ನೇಪಥ್ಯಕ್ಕೆ ಸರಿಯುವ ಆತಂಕ ಎದುರಾಗಿತ್ತು. ಈಗ ಸಾಮಾಜಿಕ ಜಾಲತಾಣದ ಅಬ್ಬರದಲ್ಲಿ ಚಿತ್ರರಂಗವೂ ಆತಂಕ ಎದುರಿಸುವಂತಾಗಿದೆ. ಇಂತಹ ಸಂದಿಗ್ಧತೆಯ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಲಾವಿದರ ಸಂಘ ಭವನವನ್ನು ನಿರ್ಮಿಸುವ ಮೂಲಕ ಮಾದರಿ ಕೆಲಸ ಮಾಡಿದೆ. ಈ ಕಾರ್ಯದಲ್ಲಿ ಸಹಕಾರ ನೀಡಿರುವ ಎಲ್ಲ ಕಲಾಸಕ್ತರ ಕೊಡುಗೆ ಅನನ್ಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಲಾವಿದರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಕಲಾ ಭವನವನ್ನು ಸರ್ಕಾರದ ಯಾವುದೇ ನೆರವಿಲ್ಲದೇ ದಾನಿಗಳ, ಗಣ್ಯರ ಸಹಕಾರದಿಂದ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿಸರ್ಕಾರದ ಅನುದಾನ ಪಡೆದು ಮೊದಲ ಅಂತಸ್ತಿನ ಕಟ್ಟಡ ಹಾಗೂ ರಂಗ ವೇದಿಕೆ ನಿರ್ಮಿಸುವ ಯೋಜನೆಯಿದೆ ಎಂದರು.

ಸಾನಿಧ್ಯ ವಹಿಸಿದ್ದ ಪುಷ್ಪಾಂಡಜಮುನಿ ಆಶ್ರಮದ ದಿವ್ಯಜ್ಞಾನಾನಂದ ಗಿರಿ ಸ್ವಾಮೀಜಿ ಮಾತನಾಡಿ, ಕಲೆ ಹಾಗೂ ಕಲಾವಿದರು ನಾಡಿನ ಸಾಂಸ್ಕೃತಿಕ ಅನನ್ಯತೆಯ ಪ್ರತೀಕ. ಎಲ್ಲಿ ಕಲಾ ಚಟುವಟಿಕೆಗಳು ಹೆಚ್ಚಿರುತ್ತವೆಯೋ ಅಲ್ಲಿ ಮನುಷ್ಯ ಸಂವೇದನೆ ಮತ್ತು ಮಾನವೀಯ ಮೌಲ್ಯಗಳು ಹೆಚ್ಚಿರುತ್ತವೆ. ಆರೋಗ್ಯಕರ ಚಿಂತನೆ, ಶಿಸ್ತುಬದ್ದ ಜೀವನಕ್ಕೆ ಕಲಾಚಟುವಟಿಕೆಗಳು ಪೂರಕ ಎಂದರು.

ಕಲಾವಿದರಿಗೆ ಸನ್ಮಾನ:
ಇದೇ ವೇಳೆ ಕಲಾವಿದರಾದ ಚಿಕ್ಕತಿಮ್ಮಾರೆಡ್ಡಿ
, ಪ್ರತಿಭಾ ನಾರಾಯಣ್, ಪದ್ಮನಾಭಯ್ಯ, ಸುಬ್ರಮಣ್ಯಾಚಾರ್, ಖಾಸ್‌ಬಾಗ್ ನಾಗರಾಜ್,ಕೃಷ್ಣಮೂರ್ತಿ, ಗಿರೀಶ್ ಸೂಲಿಬೆಲೆ ನವೀನ್ ಅವರನ್ನು ಸನ್ಮಾನಿಸಲಾಯಿತು.

ಆಕರ್ಷಕ ಮೆರವಣಿಗೆ:
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಇಲ್ಲಿನ ಪ್ರವಾಸಿ ಮಂದಿರ ವೃತ್ತದಿಂದ ಕಲಾ ಭವನದವರೆಗೆ ವಿವಿಧ ಸಾಂಸ್ಕೃತಿಕ ತಂಡಗಳು
, ಗೊರವರ ಕುಣಿತ, ವೀರಗಾಸೆ, ಗಾರುಡಿ ಗೊಂಬೆ, ಡೊಳ್ಳುಕುಣಿತ, ತಮಟೆ ಸೇರಿ ವಿವಿಧ ಜಾನಪದ ತಂಡಗಳೊಂದಿಗೆ ಆಕರ್ಷಕ ಮೆರವಣಿಗೆ ನಡೆಯಿತು. ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಯಾಪ ಅಧ್ಯಕ್ಷ ಶಾಂತಕುಮಾರ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಬಯಾಪ ಸದಸ್ಯ ಪ್ರಸನ್ನಕುಮಾರ್, ಕರ್ನಾಟಕ ರಾಜ್ಯ ಕಲಾವಿದರ ಒಕ್ಕೂಟದ ಅಧ್ಯಕ್ಷ ಗುಬ್ಬಿ ವೀರೇಶ್, ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ರಾಮಾಂಜಿನಪ್ಪ, ದೇವರಾಜು, ಓಬಕ್ಕ, ಕನ್ನಡ ಪಕ್ಷದ ಮುಖಂಡ ಸಂಜೀವನಾಯಕ್, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಜಿಲ್ಲಾ ಕಲಾವಿದರ ಸಂಘದ ಶ್ರೀಧರ್‌ಗೌಡ, ಪುಟ್ಟಸಿದ್ದಯ್ಯ, ಆರ್.ವಿ.ಮಂಜುನಾಥ, ಎಂ.ಪಿ.ನಾಗರಾಜ್ ಸೇರಿದಂತೆ ಹಲವು ನಿರ್ದೇಶಕರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ