Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಡಿಮೆ ಬಂಡವಾಳದ ಅಣಬೆ ಕೃಷಿಯಿಂದ ಆದಾಯ ಸ್ಥಿರತೆ-ರಜನೀಕಾಂತ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೃಷಿಯನ್ನು ಮಾತ್ರ ನಂಬಿ ಕುಳಿತುಕೊಳ್ಳದೆ
, ರೈತರು ಕಡಿಮೆ ಬಂಡವಾಳ ಮತ್ತು ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೊಡುವ ಅಣಬೆ ಬೇಸಾಯದಂತಹ ಉಪ ಕಸುಬುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.

ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ರೈತರಿಗಾಗಿ ಆಯೋಜಿಸಲಾಗಿದ್ದ “ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ” ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

Advertisement

ಹವಾಮಾನ ವೈಪರೀತ್ಯದ ಈ ದಿನಗಳಲ್ಲಿ ಕೃಷಿಯ ಜೊತೆಗೆ ಜೇನು ಸಾಕಾಣಿಕೆ, ಹೈನುಗಾರಿಕೆ, ಕುರಿ-ಮೇಕೆ ಮತ್ತು ಕೋಳಿ ಸಾಕಾಣಿಕೆಯಂತಹ ಪೂರಕ ಚಟುವಟಿಕೆಗಳು ಆದಾಯದ ಸ್ಥಿರತೆ ಕಾಯ್ದುಕೊಳ್ಳಲು ನೆರವಾಗಲಿವೆ. ಅಣಬೆ ಕೃಷಿಯು ಸಮಗ್ರ ಕೃಷಿ ಪದ್ಧತಿಯ ಪ್ರಮುಖ ಅಂಗವಾಗಿದ್ದು, ಆರಂಭದಲ್ಲಿ ಮನೆಯ ಸಣ್ಣ ಕೊಠಡಿಯಲ್ಲೇ ಹವ್ಯಾಸದ ರೂಪದಲ್ಲಿ ಇದನ್ನು ಆರಂಭಿಸಬಹುದು. ಅನುಭವ ಹಾಗೂ ಪರಿಣತಿ ಗಳಿಸಿದ ನಂತರ ವಾಣಿಜ್ಯ ಮಟ್ಟದಲ್ಲಿ ವಿಸ್ತರಿಸುವುದು ಸೂಕ್ತ ಎಂದು ಸಲಹೆ ನೀಡಿದರು.

ವಿವಿಧ ಅಣಬೆ ಪ್ರಭೇದಗಳಲ್ಲಿ ಚಿಪ್ಪು ಹಾಗೂ ಹಾಲು ಅಣಬೆಗಳನ್ನು ಅತ್ಯಂತ ಸುಲಭವಾಗಿ ಬೆಳೆಯಬಹುದು. ಅಣಬೆಯಲ್ಲಿ ಹೆಚ್ಚಿನ ಪೌಷ್ಟಿಕಾಂಶ, ವಿಟಮಿನ್ ಹಾಗೂ ಖನಿಜಾಂಶಗಳಿದ್ದು, ಕಡಿಮೆ ಕೊಬ್ಬು ಮತ್ತು ಸಕ್ಕರೆ ಇರುವುದರಿಂದ ಇದು ಮಧುಮೇಹ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ನಿಯಂತ್ರಣಕ್ಕೂ ಸಹಕಾರಿಯಾಗಿದೆ ಎಂದು ರಜನೀಕಾಂತ ತಿಳಿಸಿದರು.

ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ಕೃಷಿ ಸೂಕ್ಷ್ಮಜೀವ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಗೊರಪ್ಪನವರ ಭರಮಪ್ಪ ಅವರು ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಹಾಗೂ ಅಣಬೆಯಿಂದ ತಯಾರಿಸಬಹುದಾದ ವಿವಿಧ ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಭೀಮಸಮುದ್ರದ ಪ್ರಗತಿಪರ ರೈತ ತಿಪ್ಪೇಸ್ವಾಮಿ ಹಾಗೂ ಚಿತ್ರದುರ್ಗದ ಗ್ರೀನ್ ಹುಡ್ಸ್ ಮಶ್ರೂಮ್ ಸಂಸ್ಥೆಯ ಜಿ.ಎ.ವಿಶ್ವನಾಥ್ ಅವರು ಅಣಬೆ ಕೃಷಿಯಲ್ಲಿನ ತಮ್ಮ ಪ್ರಾಯೋಗಿಕ ಅನುಭವ ಹಾಗೂ ಮಾರುಕಟ್ಟೆ ವ್ಯವಸ್ಥೆಯ ಯಶೋಗಾಥೆಯನ್ನು ರೈತರೊಂದಿಗೆ ಹಂಚಿಕೊಂಡರು. ಇದೇ ವೇಳೆ ರೈತರಿಂದಲೇ ಪ್ರಾಯೋಗಿಕವಾಗಿ ಅಣಬೆ ಬೆಳೆಯುವ ವಿಧಾನವನ್ನು ಪ್ರದರ್ಶಿಸಲಾಯಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ 65ಕ್ಕೂ ಹೆಚ್ಚು ಆಸಕ್ತ ರೈತರು ಈ ತರಬೇತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ