Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಸ್ವಂತ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕೇಂದ್ರ ಸಚಿವ 

ಚಂದ್ರವಳ್ಳಿ ನ್ಯೂಸ್, ಪಾಟ್ನಾ:
ಕೇಂದ್ರ ಮತ್ತು ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಪ್ರಮುಖ ಮಿತ್ರಪಕ್ಷವಾಗಿರುವ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ಮತ್ತು ಹದಗೆಡುತ್ತಿರುವ ಕಾನೂನು-ಸುವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಂತ ಮೈತ್ರಿಕೂಟದ ಸರ್ಕಾರದ ಆಡಳಿತದ ಬಗ್ಗೆಯೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Advertisement

  ಬಿಹಾರದಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಅಪರಾಧಗಳು ಸಂಪೂರ್ಣವಾಗಿ ಹದ್ದುಮೀರಿ ಹೋಗಿರುವ ಇಂತಹ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ" ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.

ಆಡಳಿತ ಯಂತ್ರದ ವೈಫಲ್ಯ: ರಾಜ್ಯದಲ್ಲಿ ಪೊಲೀಸ್ ಮತ್ತು ಆಡಳಿತ ಯಂತ್ರ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದೆ. ಸಾಮಾನ್ಯ ಜನರನ್ನು, ಅದರಲ್ಲೂ ವಿಶೇಷವಾಗಿ ಮಹಿಳೆಯರನ್ನು ಸುರಕ್ಷಿತವಾಗಿಡುವುದು ಈಗಿನ ಆಡಳಿತದ ಸಾಮರ್ಥ್ಯಕ್ಕೆ ಮೀರಿದ ಮಾತಾಗಿದೆ ಎಂದು ಚಿರಾಗ್ ಪಾಸ್ವಾನ್ ಆರೋಪಿಸಿದ್ದಾರೆ.

ತುರ್ತು ಕ್ರಮಕ್ಕೆ ಆಗ್ರಹ: ಪರಿಸ್ಥಿತಿ ಕೈಮೀರಿ ಹೋಗುವ ಮುನ್ನವೇ ಎಚ್ಚೆತ್ತುಕೊಂಡು ಕಾನೂನು ಮತ್ತು ಸುವ್ಯವಸ್ಥೆಯನ್ನು ಮರಳಿ ಸ್ಥಾಪಿಸಲು ಸರ್ಕಾರ ತುರ್ತು ಹಾಗೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರಕ್ಕೆ ಗಂಭೀರ ಎಚ್ಚರಿಕೆ: ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ವಿಫಲವಾದರೆ ಇದು ಬಿಹಾರದ ಭವಿಷ್ಯದ ಮೇಲೆ ಮತ್ತು ಜನರ ಜೀವದ ಜೊತೆ ಚೆಲ್ಲಾಟವಾಡಿದಂತಾಗುತ್ತದೆ. ಇದು ರಾಜ್ಯವನ್ನು ಅತ್ಯಂತ ಕೆಟ್ಟ ಪರಿಣಾಮಗಳತ್ತ ಕೊಂಡೊಯ್ಯಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬಿಹಾರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಹಿರಿಯ ನಾಯಕರೊಬ್ಬರೇ ಸರ್ಕಾರದ ವೈಫಲ್ಯವನ್ನು ಬಹಿರಂಗವಾಗಿ ಟೀಕಿಸಿರುವುದು ಮತ್ತು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಮಾಡಿರುವುದು ಪ್ರಸ್ತುತ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.  

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೋಮಾಳ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಹಕ್ಕುಪತ್ರ ನೀಡಿ.. ಬಡ ನಿರಾಶ್ರಿತರಿಂದ ಉಗ್ರ ಹೋರಾಟದ ಎಚ್ಚರಿಕೆ....!ಕೆವಿಕೆಗೆ ರಾಷ್ಟ್ರೀಯ ಪ್ರಯೋಗಾಲಯದ ಎನ್ಎಬಿಎಲ್ ಮಾನ್ಯತೆಚಿನ್ನಾಭರಣ ಕಳ್ಳತನ ಆರೋಪಿ ಬಂಧನ... ಬಂದಿತನಿಂದ 25ಲಕ್ಷ ಮೌಲ್ಯದ ಚಿನ್ನಾಭರಣ ವಶಸಮಾಜಮುಖಿ ಕಾರ್ಯ ಮಾಡುತ್ತಿರುವ ಜಯಂಟ್ಸ್ ಕೇರ್ ಫೌಂಡೇಶನ್ ಬಿಗ್ ಬಾಸ್ ಸೀಸನ್-13: ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಲ್ಲೇ ಅಬ್ಬರಿಸಿದ 'ಘಾಟಿ ಗಾನವಿ'!ಭೀಕರ ಉಗ್ರರ ಸಂಚು ಭೇದಿಸಿದ ರಾಜ್ಯ ಪೊಲೀಸರು: ಪ್ರಮುಖ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್‌!ಬಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ವಿಚಾರಣೆಬಿಜೆಪಿಯವರದ್ದು ಕಪಟ ನಾಟಕ; ಕೇಂದ್ರಕ್ಕೆ ಮನವಿ ಸಲ್ಲಿಸಲು ಬಾರದಿದ್ದರೆ ರೈತರ ಪರ ನಾವೇ ಕ್ರಮ: ಡಿ.ಕೆ. ಶಿವಕುಮಾರ್ಸಿಎಂ ಆಗುವ ಆಸೆ ಇದೆ: ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಮಾತುಗಳು! ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಸ್ವಂತ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕೇಂದ್ರ ಸಚಿವ