Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಗರದ ತಾಲ್ಲೂಕು ಕಚೇರಿ ಮುಂಭಾಗ ಸೆ.26 ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಗಳನ್ನು ಸ್ಥಗಿತಗೊಳಿಸುವ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳು  ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

 ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು  ತಮ್ಮ ಸಮೂಹದ ಬೇಡಿಕೆಗಳನ್ನು ಈಡೇರಿಸಿ ಉತ್ತಮ ಮತ್ತು ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಕುರಿತು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ  ಶ್ರೀಮಂತ ಮಾತನಾಡಿ  ಗ್ರಾಮ ಆಡಳಿತ ಅಧಿಕಾರಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಸೂಕ್ತ ನಿಗದಿತ ಕಚೇರಿ ಇಲ್ಲ, ಕರ್ತವ್ಯ ನಿರ್ವಹಿಸಲು  ಅಗತ್ಯ ಮೊಬೈಲ್, ಲ್ಯಾಪ್ ಟ್ಯಾಪ್, ಇಂಟರ್ನೆಟ್ ವ್ಯವಸ್ಥೆ, ಸೇರಿದಂತೆ  ಯಾವ ಸೌಲಭ್ಯಗಳು ಸೂಕ್ತ ಸಮಯದಲ್ಲಿ ದೊರೆಯುತ್ತಿಲ್ಲ.

ಅತ್ಯಂತ ಒತ್ತಡದ ಪರಿಸ್ಥಿತಿಯಲ್ಲಿ ನಾವು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಸರ್ಕಾರಿ ಕೆಲಸ ಮಾಡಲು ನಾವು ಸದಾ ಸಿದ್ಧ ಆದರೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ಮುಂದಾಗಬೇಕಿದೆ, ಸೂಕ್ತ ಸೌಲಭ್ಯ  ಕಲ್ಪಿಸುವವರೆಗೂ ನಮ್ಮ ಈ ಮುಷ್ಕರ ನಿಲ್ಲಿಸುವುದಿಲ್ಲ ರಾಜ್ಯಾದ್ಯಂತ  ನಮ್ಮ ಗ್ರಾಮ ಆಡಳಿತ ಅಧಿಕಾರಿಗಳು  ಮುಷ್ಕರಕ್ಕೆ ಮುಂದಾಗಿದ್ದು ಸರ್ಕಾರ ಈ ಕೂಡಲೇ ಎಚ್ಚೆದ್ದು  ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು  ಆಗ್ರಹಿಸಿದರು .

 ಏನಿದೆ ಮೂಲಭೂತ ಸೌಲಭ್ಯ ಕುರಿತ ಬೇಡಿಕೆಗಳು...????
1.ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ

2.ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮೆರಾ 

3.ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ (12ಜಿಬಿ/256ಜಿಬಿ), ಸಿಯುಜಿ ಸಿಮ್ ಮತ್ತು ಡೇಟಾ

4.ಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್

5.ಪ್ರಿಂಟರ್ ಮತ್ತು ಸ್ಕ್ಯಾನ‌ರ್ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ  ಗ್ರಾಮ ಆಡಳಿತ ಅಧಿಕಾರಿಗಳು ಅಗ್ರಹಿಸಿದ್ದಾರೆ. 

ಮುಷ್ಕರದಲ್ಲಿ  ತಾಲ್ಲೂಕು ಅಧ್ಯಕ್ಷ ಶ್ರೀಮಂತ ಎಸ್ ಆಸಂಗಿಹಾಳ್,ಉಪಾಧ್ಯಕ್ಷ ಕಿರಣ್ ಕುಮಾರ್.
ಕಂದಾಯ ನೌಕರರ ಸಂಘದ ಅಧ್ಯಕ್ಷ ಬಿಸಿ ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಲಮಾಣಿ, ಉಪ ತಹಶೀಲ್ದಾರ್ ವಿನೋದ್ ಕಂದಾಯ ನಿರೀಕ್ಷಕರು - ಎಸ್.ಐ ಅನಂತಕುಮಾರ್ , ಶಿವಪ್ರಸಾದ್ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ  ನರಸಿಂಹಮೂರ್ತಿ, ಸೇರಿದಂತೆ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ