ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ನೆಲ್ಲುಗುದಿಗೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಮುಖ್ಯೋಪಾದ್ಯಾಯರಾದ ಪಾಪಣ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ 1336 ರಲ್ಲಿ ವ್ಯಾಪಾರಕ್ಕಾಗಿ ಬಂದ ಬ್ರಿಟೀಷರು ಇಲ್ಲಿ ಇದ್ದಂತಹ ಮುತ್ತು ರತ್ನ ವಜ್ರ ವೈಡೂರ್ಯ್ಯಗಳನ್ನು ಕಂಡು ಸಣ್ಣಪುಟ್ಟ ರಾಜರನ್ನು ಎತ್ತಿ ಕಟ್ಟಿ ಭಾರತವನ್ನ ತಮ್ಮ ವಶ ಮಾಡಿಕೊಂಡು ಸುಮಾರು ಎರಡು ನೂರು ವರ್ಷ ಕಾಲ ಆಳ್ವಿಕೆ ನಡೆಸಿದರು.ಮಹಾತ್ಮ ಗಾಂಧೀಜಿ ಸೇರಿದಂತೆ ಸಾವಿರಾರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ನಂತರ 1947 ಆಗಸ್ಟ್ 15 ರಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕಿತ್ತು. ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸರ್ದಾರ ವಲ್ಲಭಭಾಯಿ ಪಟೇಲ್ ಇನ್ನೂ ಮುಂತಾದ ಮಹಾನ್ ನಾಯಕರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅವರ ತ್ಯಾಗದ ಫಲ. ದೇಶವನ್ನು ರಕ್ಷಿಸುವುದು ಮತ್ತು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮ ದಲ್ಲಿ ಶಾಲಾ ಮಕ್ಕಳು ಹಾಗು ಅಂಗನವಾಡಿ ಮಕ್ಕಳಿಂದ ಸಾಂಸ್ಕ್ರುತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ಸಿದ್ದಪ್ಪ ಬೀರಪ್ಪ,ಅಂಗನವಾಡಿ ಶಿಕ್ಷಕಿ, ಶಾಲಾ ಸಿಬ್ಬಂದಿ, ಆಶಾ ಕಾರ್ಯಕರ್ತರು, ಹಾಗೂ ಗ್ರಾಮಸ್ಥರು ಹಾಜರಿದ್ದರು.



