LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯ ಏಕತೆ ಸಾರ್ವಭೌಮತೆಯ ಪ್ರತೀಕ:ಜಿ. ಎಂ. ನಾಗರಾಜು

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾರತ ಸ್ವಾತಂತ್ರ್ಯ ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನ, ಏಕತೆ ಮತ್ತು ಸಾರ್ವಭೌಮತೆಯ ಅಚಲ ಪ್ರತೀಕವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು  ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

       ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಬದ್ಧತೆ,  ಅಚಲವಾದ ದೇಶಪ್ರೇಮ, ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದ  ಎಂದಿಗೂ ಸ್ಪೂರ್ತಿದಾಯಕವಾಗಿದೆ. ಭಾರತ ಸ್ವಾತಂತ್ರ್ಯ ಚಳುವಳಿ ಜಗತ್ತಿನ ಬಹುದೊಡ್ಡ ಜನಾಂದೋಲನ ಎಂದು ಪ್ರಖ್ಯಾತವಾಗಿದೆ ಎಂದರು.

   ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ,  ಸ್ವಾತಂತ್ರ್ಯದಿಂದ   ಭಾರತ ಸಾರ್ವಭೌಮ ರಾಷ್ಟ್ರವಾಗಿ  ಉದಯವಾಯಿತು.   ದೇಶದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ನ್ಯಾಯ ಮತ್ತು ಸಂವಿಧಾನಿಕ ಮೌಲ್ಯಗಳಿಗೆ ಅಡಿಪಾಯ ಹಾಕಿತು. ಸ್ವಾತಂತ್ರ್ಯ ನಂತರ ಭಾರತ  ಆಗಾಧವಾದ ಸಾಧನೆ ಮಾಡಿದೆ ಎಂದರು.

   ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರಾಂಶುಪಾಲ ಎಂ.ಸಿ.ಮಂಜುನಾಥ್,   ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ನಾಗರಾಜ್ ಸಂಕಣ್ಣ, ನಾಗದಳ ನಟರಾಜ್, ದರ್ಗಾಜೋಗಿಹಳ್ಳಿ ಮಲ್ಲೇಶ್,  ನಾಗರತ್ನಮ್ಮ, ಬಾಶೆಟ್ಟಿಹಳ್ಳಿ ಮಂಜುನಾಥ್,  ಷಫೀರ್, ವೆಂಕಟರಾಜು, ಮುನಿರಾಜು, ರಂಗಸ್ವಾಮಯ್ಯ, ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಗಳ ಉಳಿವಿಗೆ ಜಾಗೃತಿ ಅಗತ್ಯ: ಕೆಜಿ ಹನುಮಂತರಾಯ‘ನಾನು ಸಚಿವನಾಗಿರುವುದು ಶ್ರೀರಾಮುಲುಗೆ ಸಹಿಸಲು ಆಗುತ್ತಿಲ್ಲ’: ಬಿ. ನಾಗೇಂದ್ರ‘ವಂದೇ ಮಾತರಂ’ ಗೀತೆ ಆಕ್ಷೇಪ ವಿವಾದ: ಬಿಜೆಪಿ ಆರೋಪಕ್ಕೆ ಸೋನಿಯಾ ಗಾಂಧಿ ಪರವಾಗಿ ಕಾಂಗ್ರೆಸ್ ಸ್ಪಷ್ಟನೆ!ಭದ್ರಾ ನೀರಿಗಾಗಿ ಆ.18ಕ್ಕೆ ಸಿಎಂ ಜೊತೆ ಸಭೆ: ರೈತರಿಂದ ಹೆದ್ದಾರಿ ತಡೆ ಹಿಂಪಡೆತ!ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ ಘೋಷಣೆ!‘RSS ನೋಂದಣಿಯೂ ಇಲ್ಲ, ಆಗೋದೂ ಇಲ್ಲ’: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು!ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್2047ರ ‘ವಿಕಸಿತ ಭಾರತ’ಕ್ಕಾಗಿ ದೊಡ್ಡ ಕನಸು ಕಾಣಲು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ!80ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶಕ್ಕೆ ಪ್ರಧಾನಿ ಮೋದಿ ನೀಡಿದ ಸಂದೇಶಗಳಿವು!ಪೆಟ್ರೋಲ್, ಡೀಸೆಲ್ ಮೇಲಿನ ವಿಂಡ್‌ಫಾಲ್ ತೆರಿಗೆ ಕಡಿತಗೊಳಿಸಿದ ಕೇಂದ್ರ!