Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕದನ ವಿರಾಮ ಘೋಷಣೆ ಮಾಡಿದ ಭಾರತ-ಪಾಕಿಸ್ತಾನ

Advertisement
ಚಂದ್ರವಳ್ಳಿ ನ್ಯೂಸ್, ಹೊಸದಿಲ್ಲಿ:
ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಕಳೆದ
4 ದಿನಗಳಿಂದ ನಡೆಯುತ್ತಿದ್ದ ಅಘೋಷಿತ ಯುದ್ಧ ದಾಳಿಗೆ ಕದನ ವಿರಾಮ ನೀಡಲಾಗಿದೆ. ಈ ಬಗ್ಗೆ ಸ್ವತಃ ಭಾರತ ಸರ್ಕಾರವು ಖಚಿತ ಪಡಿಸಿದೆ.

ಭಾರತ ಮತ್ತು ಪಾಕಿಸ್ತಾನ ಪರಸ್ಪರ ಒಪ್ಪಿಗೆ ಮೇರೆಗೆ ಶನಿವಾರ ಸಂಜೆ 5 ರಿಂದ ಎಲ್ಲಾ ರೀತಿಯ ದಾಳಿಗಳನ್ನು ಸ್ಥಗಿತಗೊಳಿಸುತ್ತಿದ್ದೇವೆ. ಈ ಸಂಬಂಧ ಎರಡು ದೇಶಗಳ ನಡುವೆ ಮೇ 12 (ಸೋಮವಾರ) ಮಾತುಕತೆ ಇದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ ಮಿಸ್ರಿ ತಿಳಿಸಿದ್ದಾರೆ.

ಪಾಕಿಸ್ತಾನ ಸೇನೆಯ ಮಹಾನಿರ್ದೇಶಕರು ಭಾರತದ ಮಹಾನಿರ್ದೇಶಕರಿಗೆ ಮಧ್ಯಾಹ್ನ 3.35ಕ್ಕೆ ಕರೆ ಮಾಡಿ ಮಾತನಾಡಿದ್ದು, ಇಬ್ಬರು ಎಲ್ಲ ರೀತಿಯ ದಾಳಿ ಹಾಗೂ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಲು ಒಪ್ಪಿಕೊಂಡಿದ್ದಾರೆ.
ಸಂಜೆ
5 ಗಂಟೆಯಿಂದ ಭೂಮಿ, ವಾಯು ಮತ್ತು ಸಾಗರದ ಮೂಲಕ ಯಾವುದೇ ರೀತಿಯ ದಾಳಿ ನಡೆಸದಿರಲು ಎರಡು ದೇಶಗಳು ಒಪ್ಪಿಕೊಂಡಿವೆ ಎಂದು ವಿಕ್ರಮ್‌ಮಿಸ್ರಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮೇ
12ಕ್ಕೆ ಮಾತುಕತೆ

ಭಾರತ ಮತ್ತು ಪಾಕಿಸ್ತಾನ ದೇಶಗಳ ಎರಡು ಕಡೆಯಿಂದ ಕೆಲವು ಸೂಚನೆಗಳನ್ನು ನೀಡಲಾಗಿದ್ದು, ಉಭಯ ಸೇನಾ ಮಹಾ ನಿರ್ದೇಶಕರು ಈ ಬಗ್ಗೆ ಮೇ 12ರಂದು ಮಧ್ಯಾಹ್ನ 12ಕ್ಕೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ಟ್ರಪ್‌ಮಾತುಕತೆ ಮಾಡಿದ್ದಾರೆ. ಎರಡು ದೇಶಗಳು ಒಪ್ಪಿ ಕದನ ವಿರಾಮಕ್ಕೆ ಮುಂದಾಗಿವೆ. ಸಮಯೋಚಿತ ನಿರ್ಧಾರಕ್ಕೆ ಎರಡೂ ದೇಶಗಳಿಗೂ ಶುಭಾಶಯಗಳು ಎಂದು ಸ್ವತಃ ಟ್ರಂಪ್‌ಟ್ವೀಟ್‌ಮೂಲಕ ಮಾಹಿತಿ ನೀಡಿದ್ದಾರೆ.

ವಿದೇಶಾಂಗ ಸಚಿವ ಜೈ ಶಂಕರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ಮತ್ತು ಪಾಕಿಸ್ತಾನ ಶನಿವಾರದಿಂದ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ದಾಳಿ-ಪ್ರತಿ ದಾಳಿ
ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ದಾಳಿಯ ಪ್ರತಿಕಾರವಾಗಿ ಭಾರತ ಸೇನೆಯು ಮಂಗಳವಾರ ಮಧ್ಯರಾತ್ರಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕೈಗೊಂಡಿತ್ತು.


ಆ ಬಳಿಕ ಪಾಕಿಸ್ತಾನ ಗುರುವಾರ ಜಮ್ಮು ಸೇರಿದಂತೆ ಭಾರತದ 15 ನಗರಗಳ ಸೇನಾನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಅದೇ ದಿನ ಸಂಜೆ ಜಮ್ಮು ಸೇರಿದಂತೆ ವಿವಿಧ ಗಡಿ ರಾಜ್ಯಗಳ ಮೇಲೆ ಮತ್ತೆ ಕ್ಷಿಪಣಿ ದಾಳಿ ನಡೆಸಿತ್ತು. ಭಾರತೀಯ ಸೇನೆಯು ದಾಳಿಯನ್ನು ತಡೆಗಟ್ಟಿತ್ತು. ಹೆಚ್ಚಿನ ಹಾನಿಯಾಗದಂತೆ ಕ್ರಮವಹಿಸಿ ಪಾಕಿಸ್ತಾನ ದಾಳಿಗೆ ಪ್ರತಿಯಾಗಿ ಮಾತ್ರ ದಾಳಿ ಮಾಡಿತ್ತು. ಶುಕ್ರವಾರವೂ ಭಾರತದ 26 ಕಡೆ ಪಾಕಿಸ್ತಾನ ಸೇನೆ ದಾಳಿ ಮಾಡಿ ಭಾರತವನ್ನು ಮತ್ತಷ್ಟು ಕೆರಳಿಸಿತ್ತು. ಶನಿವಾರ ಅಮೆರಿಕ ಮಧ್ಯ ಪ್ರವೇಶ ಮಾಡಿದ್ದು ಸದ್ಯ ಎರಡು ದೇಶಗಳು ಕದನ ವಿರಾಮಕ್ಕೆ ಮುಂದಾಗಿವೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ