Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 12ರಂದು ಭಾರತ-ಪಾಕಿಸ್ತಾನ ಮಧ್ಯ ಮಹತ್ವದ ಸಭೆ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರ ಮಧ್ಯ ಪ್ರವೇಶದಿಂದಾಗಿ ಕಳೆದ 3 ದಿನಗಳಿಂದ ನಡೆಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ದಾಳಿ ಮತ್ತು ಪ್ರತಿ ದಾಳಿಗೆ ತಾತ್ಕಾಲಿಕ ತೆರೆ ಬಿದ್ದಿದ್ದು ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ.


ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಕರೆ ಮಾಡಿ ದಾಳಿ ನಿಲ್ಲಿಸುವಂತೆ ಒತ್ತಾಯಿಸಿದ್ದು ಆ ನಂತರ ಕದನ ವಿರಾಮ ಕ್ರಿಯೆ ಪ್ರಾರಂಭಿಸಲಾಯಿತು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ.

ಪಾಕಿಸ್ತಾನದ ಡಿಜಿಎಂಒ ಭಾರತಕ್ಕೆ ಮಧ್ಯಾಹ್ನ 3.35ರ ಸುಮಾರಿಗೆ ಕರೆ ಮಾಡಿದ್ದರು ಎಂದು ಮಿಶ್ರಿ ತಿಳಿಸಿದ್ದು ಸದ್ಯ ಕದನ ವಿರಾಮವು 5 ಗಂಟೆಯಿಂದ ಜಾರಿಗೆ ಬರಲಿದೆ ಎಂದು ಘೋಷಿಸಿದರು.
ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಉಭಯ ದೇಶಗಳ ಡಿಜಿಎಂಒಗಳು ಮಾತುಕತೆ ನಡೆಸಲಿದ್ದಾರೆ ಎಂದು ಮಿಶ್ರಿ ತಿಳಿಸಿದರು.


ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಭಾರತ ಮತ್ತು ಪಾಕಿಸ್ತಾನವು ತಮ್ಮ ಮಧ್ಯಸ್ಥಿಕೆ ನಂತರ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ.

ಸಾಮಾನ್ಯಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಡೊನಾಲ್ಡ್ ಟ್ರಂಪ್ ತಮ್ಮ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದನ್ನು ಸ್ಮರಿಸಬಹುದಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ