ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖ್ಯಾತ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರನ್ನು ಸುಮಾರು ಮೂರು ವರ್ಷಗಳ ನಂತರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
'ಇಂಡಿಯಾ ಟುಡೇ ರೌಂಡ್‌ಟೇಬಲ್ ಕರ್ನಾಟಕ' ಕಾರ್ಯಕ್ರಮದ 'TheRegionalPlayer' ಗೋಷ್ಠಿಯಲ್ಲಿ ಭಾಗವಹಿಸಿದ ಅವರು, ರಾಜ್ಯದಲ್ಲಿ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಪಾತ್ರ ಹಾಗೂ ಕರ್ನಾಟಕದ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತು ವಿಸ್ತೃತವಾದ ವಿಚಾರಗಳನ್ನು ಹಂಚಿಕೊಂಡರು.
ಸಭೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ, "ರಾಜ್‌ದೀಪ್ ಸರ್ದೇಸಾಯಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಕುರಿತು ಅತ್ಯಂತ ರೋಚಕ ಹಾಗೂ ಅರ್ಥಪೂರ್ಣ ಚರ್ಚೆ ನಡೆಯಿತು. ಜೆಡಿಎಸ್ ಪಕ್ಷದ ದೃಷ್ಟಿಕೋನಗಳನ್ನು ಹಾಗೂ ರಾಜ್ಯದ ರಾಜಕೀಯ ಭವಿಷ್ಯವನ್ನು ಹಂಚಿಕೊಳ್ಳಲು ಸಂತಸವೆನಿಸಿತು" ಎಂದಿದ್ದಾರೆ.




