Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
೨೦೨೪ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾ ಇತಿಹಾಸದಲ್ಲೇ ಸುವರ್ಣ ಅಕ್ಷರಗಳಲ್ಲಿ ದಾಖಲಾಗುವಂತಹ ಸಾಧನೆ ಮಾಡಿದ ಯುವ ಶೂಟಿಂಗ್ ಪಟು ಮನು ಭಾಕರ್.

ಒಂದೇ ಒಲಿಂಪಿಕ್ಸ್ ಆವೃತ್ತಿಯಲ್ಲಿ ಭಾರತಕ್ಕೆ ಎರಡು ಪದಕಗಳನ್ನು ತಂದುಕೊಟ್ಟ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.  
ಪರಿಚಯ ಮತ್ತು ಆರಂಭಿಕ ಜೀವನ ಜನನ: ೧೮ ಫೆಬ್ರವರಿ ೨೦೦೨,  ಹುಟ್ಟೂರು: ಘೋರಿಯಾ ಗ್ರಾಮ, ಝಜ್ಜರ್ ಜಿಲ್ಲೆ, ಹರಿಯಾಣ.

Advertisement

ಕ್ರೀಡೆ: ೧೦ ಮೀಟರ್ ಏರ್ ಪಿಸ್ತೂಲ್ ಮತ್ತು ೨೫ ಮೀಟರ್ ಪಿಸ್ತೂಲ್ ಶೂಟಿಂಗ್.  ತರಬೇತುದಾರರು: ಜಸ್ಪಾಲ್ ರಾಣಾ, ಶಾಲಾ ದಿನಗಳಲ್ಲಿ ಕರಾಟೆ, ಬಾಕ್ಸಿಂಗ್ ಹಾಗೂ ಸ್ಕೇಟಿಂಗ್ ಕ್ರೀಡೆಗಳಲ್ಲಿ ಸಕ್ರಿಯರಾಗಿದ್ದ ಮನು, ನಂತರದ ದಿನಗಳಲ್ಲಿ ಶೂಟಿಂಗ್‌ನತ್ತ ಗಮನಹರಿಸಿದರು. 
ತಮ್ಮ ೧೪ನೇ ವಯಸ್ಸಿನಲ್ಲಿ ಶೂಟಿಂಗ್ ಆರಂಭಿಸಿದ ಇವರು, ಅತಿ ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಾರ ಯಶಸ್ಸು ಸಾಧಿಸಿದರು.

ಪ್ರಮುಖ ಸಾಧನೆಗಳು: 
ಪ್ಯಾರಿಸ್ ಒಲಿಂಪಿಕ್ಸ್ ೨೦೨೪ ೧೦ ಮೀ. ಏರ್ ಪಿಸ್ತೂಲ್ (ಮಹಿಳೆಯರ ವೈಯಕ್ತಿಕ)ಕಂಚಿನ ಪದಕ. 
ಪ್ಯಾರಿಸ್ ಒಲಿಂಪಿಕ್ಸ್ ೨೦೨೪ ೧೦ ಮೀ. ಏರ್ ಪಿಸ್ತೂಲ್ (ಮಿಶ್ರ ತಂಡ - ಸರಬ್ಜೋತ್ ಸಿಂಗ್ ಜೋಡಿ) ಕಂಚಿನ ಪದಕ. 

ಕಾಮನ್‌ವೆಲ್ತ್ ಗೇಮ್ಸ್ ೨೦೧೮ ೧೦ ಮೀ. ಏರ್ ಪಿಸ್ತೂಲ್ ಸ್ವರ್ಣ ಪದಕ. ಏಷ್ಯನ್ ಗೇಮ್ಸ್ ೨೦೨೩ ೨೫ ಮೀ. ಪಿಸ್ತೂಲ್ (ತಂಡ ವಿಭಾಗ)ಸ್ವರ್ಣ ಪದಕ. ISSF ವಿಶ್ವಕಪ್ ವಿವಿಧ ವಿಭಾಗಗಳು: ೧೩ ಕ್ಕೂ ಹೆಚ್ಚು ಚಿನ್ನದ ಪದಕಗಳು ಹಿನ್ನಡೆಯಿಂದ ಐತಿಹಾಸಿಕ ತಿರುವು ೨೦೨೦ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಿಸ್ತೂಲ್ ತಾಂತ್ರಿಕ ದೋಷದಿಂದಾಗಿ ಪದಕ ಕೈತಪ್ಪಿದಾಗ ಮನು ತೀವ್ರ ನಿರಾಶೆ ಅನುಭವಿಸಿದ್ದರು. ಆದರೆ, ಆ ವೈಫಲ್ಯಕ್ಕೆ ಬಗ್ಗದೆ ಕಠಿಣ ಪರಿಶ್ರಮ ಮತ್ತು ಮಾನಸಿಕ ಧೃಡತೆಯಿಂದ ಮರಳಿದ ಇವರು, ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 
ಗೌರವಗಳು: ಇವರ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರವು ಕ್ರೀಡಾ ರಂಗದ ಅತ್ಯುನ್ನತ ಪುರಸ್ಕಾರವಾದ 'ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ