ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಪ್ರಥಮ ಮಹಿಳಾ ಪ್ರಧಾನಮಂತ್ರಿ, ‘ಉಕ್ಕಿನ ಮಹಿಳೆ’ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ಸೇವಾದಳ ಯಂಗ್ ಬ್ರಿಗೇಡ್ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಇಂದಿರಾಗಾಂಧಿಯವರ ಅಭಿಮಾನಿಗಳು ಸಕ್ರಿಯವಾಗಿ ಪಾಲ್ಗೊಂಡು ರಕ್ತದಾನ ಮಾಡಿದರು.
ಶಿಬಿರದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‌ಪೀರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಆರ್. ಶಿವಣ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫಿ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್ ರಾಮ ನಾಯಕ್ ಹಾಗೂ ಮುಖಂಡರಾದ ಗುರು ಶೆಟ್ಟಿ, ಶಶಾಂಕ್, ಮೊಹಮ್ಮದ್ ಆಜಮ್, ಜೆ.ಬಿ.ಎಂ. ಅಧ್ಯಕ್ಷ ದಾದಾಪೀರ್, ಸಂದೀಪ್, ಫಜಲೂರ್ ರೆಹಮಾನ್, ಸುಹೇಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ರಕ್ತದಾನ ಮಾಡಿದರು.
ಐಮಂಗಳದಲ್ಲಿ ನವೆಂಬರ್ 3 ರಂದು ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ: ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಭರ್ಜರಿ ಸಿದ್ಧತೆ
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಐಮಂಗಳ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 3 ರ ಮಂಗಳವಾರದಂದು ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ.
ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಮಕ್ಕಳಲ್ಲಿ ಅರಿವು ಮತ್ತು ಅಭಿಮಾನ ಮೂಡಿಸುವ ಸದುದ್ದೇಶದಿಂದ ಈ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ತಮ್ಮ ಶಾಲೆಯಲ್ಲಿ ನಡೆಸಲು ಅವಕಾಶ ಕಲ್ಪಿಸಿಕೊಟ್ಟ ಕನ್ನಡ ಸಾಹಿತ್ಯ ಪರಿಷತ್ತಿನ ಐಮಂಗಳ ಘಟಕಕ್ಕೆ ಜಾಗೃತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಬೆಳಗೆರೆ ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಕಡ್ಡಾಯ ಹಾಜರಾತಿ: ಅಂದು ಎಲ್ಲಾ ಮಕ್ಕಳು ಎಂದಿನಂತೆ ಶಾಲೆಗೆ ಹಾಜರಾಗುವುದು ಕಡ್ಡಾಯವಾಗಿದೆ.
ಬ್ಯಾಗ್‌ಲೆಸ್ ಡೇ: ಸಮ್ಮೇಳನದ ದಿನದಂದು ಶಾಲೆಯಲ್ಲಿ ಬ್ಯಾಗ್‌ಲೆಸ್ ಡೇ ಆಚರಿಸಲಾಗುತ್ತಿದ್ದು, ಮಕ್ಕಳು ಪುಸ್ತಕದ ಬ್ಯಾಗ್ ಹಾಗೂ ಲಂಚ್ ಬಾಕ್ಸ್ ತರುವ ಅಗತ್ಯವಿರುವುದಿಲ್ಲ.
ಊಟದ ವ್ಯವಸ್ಥೆ: ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪೋಷಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.
ಕನ್ನಡ ನಾಡು-ನುಡಿಯ ಸೇವೆ ಮತ್ತು ಈ ಸಾಹಿತ್ಯಿಕ ಚಟುವಟಿಕೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಆಡಳಿತ ಮಂಡಳಿ ವಿನಂತಿಸಿದೆ.




