Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾ ಹೆಸರು ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂದಿರಾಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು! ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇಂದಿರಾಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು. ಇಂದಿರಾಗಾಂಧಿ ಅವರು ಈ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಗೆ ದೊಡ್ಡ ಕೊಡುಗೆ ನೀಡಿ ಹುತಾತ್ಮರಾದವರು. ಅವರು ಪ್ರಧಾನಿಗಳಾಗಿದ್ದಾಗ ಈ ದೇಶಕ್ಕೆ ನೀಡಿದ ಕಾರ್ಯಕ್ರಮಗಳು ಇಂದಿಗೂ ಜೀವಂತವಾಗಿವೆ ಎಂದು ಡಿಸಿಎಂ ತಿಳಿಸಿದರು.

ಬೆಂಗಳೂರಿನ ಜೆ ಪಿ ನಗರದ ಸಾರಕ್ಕಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಡತನ ನಿವಾರಣೆಗೆ ದಿಟ್ಟ ‌ನಿರ್ಧಾರ ತೆಗೆದುಕೊಂಡರು. ಇಂದಿರಾ ಗಾಂಧಿಯವರ ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ರಾಜ್ಯದಲ್ಲಿ ದೇವರಾಜ ಅರಸು ಅವರು ಜಾರಿಗೆ ತಂದು ಬಡವರಿಗೆ ಭೂಮಿ ಹಂಚಿದರು. ಇದರಿಂದ‌ಲಕ್ಷಾಂತರ ಜನ ಭೂಮಿ ಪಡೆಯುವಂತಾಯಿತು. ಪ್ರತಿಯೊಂದು ತಾಲ್ಲೂಕಿನಲ್ಲಿ 10-15 ಸಾವಿರ ರೈತರು ಇದರ ಫಲಾನುಭವಿಗಳಾದರು. ಇಡೀ ದೇಶದಲ್ಲಿಯೇ ಇಂತಹ ಭೂಕ್ರಾಂತಿ ಎಲ್ಲಿಯೂ ಆಗಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ ಜನಸಾಮಾನ್ಯರ ಬದುಕಿಗೆ ನೆರವಾದರು. ಸಣ್ಣ ಆರ್ಥಿಕ ಬೆಂಬಲಕ್ಕೂ ಕಷ್ಟ ಪಡುತ್ತಿದ್ದ ಜನರಿಗೆ ಸಾಲ ದೊರೆಯುವಂತಾಯಿತು.

ಆರ್ಥಿಕ ಸಂಕಷ್ಟ ಶಮನಕ್ಕೆ ಈ ನಿರ್ಧಾರ ನಾಂದಿಯಾಯಿತು. ಇದರಿಂದ ಕೇಂದ್ರ ಸಚಿವರಾಗಿದ್ದ ಜನಾರ್ಧನ ಪೂಜಾರಿಯವರು ಸಾಲ ಮೇಳ ಏರ್ಪಡಿಸಿ ರಸ್ತೆಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ 5 ರಿಂದ 10 ಸಾವಿರದ ತನಕ ಸಾಲ ನೀಡಿ ದೊಡ್ಡ ಕ್ರಾಂತಿಕಾರಕ ನಡೆಗೆ ಕಾರಣರಾದರು. ವಿಧಾ‌ನಸಭೆ ಚುನಾವಣೆ ಸೋತಿದ್ದ ನಾನು ನನ್ನ ಕ್ಷೇತ್ರದಲ್ಲಿ ಸಾಲಮೇಳ ಏರ್ಪಡಿಸಿ ಜಿಲ್ಲಾ ಪಂಚಾಯತಿ ಚುನಾವಣೆ ಗೆದ್ದು ಬಂದೆನು ನಾನು ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಭಾರತ್ ಜೋಡೋ ಯಾತ್ರೆ ವೇಳೆ ಮೊಣಕಾಲ್ಮೂರು ಬಳಿ ಅಜ್ಜಿಯೊಬ್ಬರು ಬಂದು 'ನಿಮ್ಮ ಅಜ್ಜಿ ನೀಡಿದ ಭೂಮಿಯಲ್ಲಿ ಬೆಳೆದ ಬೆಳೆ' ರಾಹುಲ್ ಗಾಂಧಿ ಅವರಿಗೆ ಸೌತೆಕಾಯಿ ನೀಡಿ ಆಶೀರ್ವಾದ ಮಾಡಿದ್ದರು. ಇದು ಸಾಧ್ಯವಾಗಿದ್ದು ಕಾಂಗ್ರೆಸ್ ಪಕ್ಷ ಹಾಗೂ ಇಂದಿರಾಗಾಂಧಿ ಅವರಿಂದ ಎಂದು ಡಿಸಿಎಂ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ