Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಪದಾಧಿಕಾರಿಗಳ ಪದಗ್ರಹಣ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಾಲ್ಲೂಕಿನ ಎಸ್.ಆರ್ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಜಾತ್ಯತೀತ ಜನತಾದಳದ (ಜೆಡಿಎಸ್) ವತಿಯಿಂದ ಹಮ್ಮಿಕೊಳ್ಳಲಾಗಿದ್ದ
BLA-2 (Booth Level Agents) ಕಾರ್ಯಾಗಾರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಮಹತ್ವದ ಮಾರ್ಗದರ್ಶನ ನೀಡಿದರು.

​ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ-
​ಚುನಾವಣಾ ಆಯೋಗವು ಪ್ರಸ್ತುತ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (
SIR) ಪ್ರಕ್ರಿಯೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಮಾಹಿತಿ ನೀಡಿದರು. "ಪ್ರಜಾಪ್ರಭುತ್ವದ ಅಡಿಪಾಯವೇ ಮತದಾನ, ಹೀಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಅರ್ಹ ಮತದಾರರ ಹೆಸರು ಸೇರ್ಪಡೆ ಹಾಗೂ ತಪ್ಪುಗಳ ತಿದ್ದುಪಡಿಯತ್ತ ಗಮನಹರಿಸಬೇಕು" ಎಂದು ಅವರು ಕರೆ ನೀಡಿದರು.

​BLA-2 ಜವಾಬ್ದಾರಿಗಳ ಬಗ್ಗೆ ಚರ್ಚೆ-
​ಬೂತ್ ಮಟ್ಟದ ಏಜೆಂಟ್ (
BLA-2) ಗಳ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ಚುನಾವಣಾ ಸಮಯದಲ್ಲಿ ಮತ್ತು ಅದಕ್ಕೂ ಮೊದಲು ಅವರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಯಿತು.

​"ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಶಿಸ್ತಿನಿಂದ ಸಂಘಟಿತರಾಗಿ ಪಕ್ಷವನ್ನು ಬಲಪಡಿಸಬೇಕು," ಎಂದು ಇದೇ ಸಂದರ್ಭದಲ್ಲಿ ಮುಖಂಡರು ಕಿವಿಮಾತು ಹೇಳಿದರು. ​ಈ ಸಮಾರಂಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಲವು ಗಣ್ಯರು ಉಪಸ್ಥಿತರಿದ್ದರು.

​ಜೆಡಿಎಸ್ ಜಿಲ್ಲಾಧ್ಯಕ್ಷ ಹೆಚ್.ಸಿ ಜಯಮುತ್ತು, ಕನಕಪುರ ತಾಲ್ಲೂಕು ಅಧ್ಯಕ್ಷ ನಾಗರಾಜ್, BLA-2 ಅಧ್ಯಕ್ಷ ಚಿನ್ನಸ್ವಾಮಿ,  ಜೆಡಿಎಸ್ ವಕ್ತಾರ ​ಹೆಚ್.ಎನ್‌ದೇವರಾಜು, ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ್, ಮುಖಂಡರುಗಳಾದ ರಾಜೇಶ್, ಪುಟ್ಟರಾಜು, ಶಿವಕುಮಾರ್, ಕಬ್ಬಾಳೆಗೌಡ ಹಾಗೂ ತಾಲ್ಲೂಕಿನ ವಿವಿಧ ಘಟಕಗಳ ಪದಾಧಿಕಾರಿಗಳು, ಮಹಿಳಾ ಮುಖಂಡರು ಮತ್ತು ನೂರಾರು ಸಂಖ್ಯೆಯ ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ