Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ಸ್ಪ್ರಿಂಗ್‌ಬೋರ್ಡ್‌ಮಾಧ್ಯಮ ಅಕಾಡೆಮಿ ಒಡಂಬಡಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ಸಿಎಸ್‌ಆರ್‌ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ.


ಪತ್ರಕರ್ತರ ಸಾಫ್ಟ್‌ಸ್ಕಿಲ್‌ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್.‌ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ.

ಇನ್ಫೋಸಿಸ್ CSR ಯೋಜನೆಯ ಸ್ಪ್ರಿಂಗ್‌ಬೋರ್ಡ್ಪ್ಲಾಟ್‌ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ನಿರ್ಮಾಣ ಈ ಒಡಂಬಡಿಕೆಯ ಉದ್ದೇಶವಾಗಿದೆ.


ಇನ್‌ಫೋಸಿಸ್‌ಸ್ಪ್ರಿಂಗ್‌ಬೋರ್ಡ್‌ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಭಾಗಿತ್ವವು ಬದಲಾಗುತ್ತಿರುವ ಹೊಸ ಮಾಧ್ಯಮಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ವಿನೂತನ ಪ್ಲಾಟ್‌ಫಾರಂ ಮಾಧ್ಯಮ ವೃತ್ತಿಪರರ ಕೌಶಲ್ಯ ಉನ್ನತೀಕರಣಕ್ಕೆ,

ಅದರಲ್ಲೂ ವಿಶೇಷವಾಗಿ ಪತ್ರಕರ್ತರಿಗೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶಗಳಿಗೆ ಅನುಗುಣವಾಗಿ ತಾಂತ್ರಿಕ ಪರಿಣತಿ ಹಾಗೂ ಸುದ್ದಿಯನ್ನು ಪ್ರಸ್ತುತಪಡಿಸುವ ಕೌಶಲವನ್ನು ಒದಗಿಸಲಿದೆಎಂಬ ಆಶಯವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ಅವರು ವ್ಯಕ್ತಪಡಿಸಿದ್ದಾರೆ.
ಇನ್‌ಫೋಸಿಸ್‌ಸ್ಪ್ರಿಂಗ್‌ಬೋರ್ಡ್‌ಶಿಕ್ಷಣ ಕುರಿತ ಸಿಎಸ್‌ಆರ್‌ಕಾರ್ಯಕ್ರಮವಾಗಿದೆ. ಇಂದು

ಇನ್‌ಫೋಸಿಸ್‌ಸ್ಪ್ರಿಂಗ್‌ಬೋರ್ಡ್‌ಮಾಧ್ಯಮ ಅಕಾಡೆಮಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಮಾಧ್ಯಮ ಅಕಾಡೆಮಿಗೆ ಸ್ಪ್ರಿಂಗ್‌ಬೋರ್ಡ್‌ನ ಡಿಜಿಟಲ್‌ವಿಷಯಗಳಿಗೆ ಪ್ರವೇಶ ಲಭಿಸಲಿದೆ ಮತ್ತು ಅವರು ಸಾಫ್ಟ್ ಸ್ಕಿಲ್ ಗಳು, ವ್ಯಕ್ತಿತ್ವ ವಿಕಾಸ ಹಾಗೂ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಇತ್ತೀಚಿನ ತಂತ್ರಜ್ಞಾನಗಳ ಅವಲೋಕನ ಕುರಿತ ವಿಷಯಗಳಿಂದ ಪ್ರಯೋಜನ ಪಡೆಯಬಹುದು.

ಇದು ವಿಶೇಷವಾಗಿ 2ನೇ ಹಾಗೂ 3ನೇ ಹಂತದ ನಗರಗಳ ಪತ್ರಕರ್ತರಿಗೆ ಖಂಡಿತವಾಗಿಯೂ ಸಹಾಯಕವಾಗಲಿದೆಎಂದು ಇನ್ಫೋಸಿಸ್ ನ ಹಿರಿಯ ಉಪಾಧ್ಯಕ್ಷ (ಇ ಟಿ ಎ) ಸತೀಶ ಬಿ. ನಂಜಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.

ತರಬೇತಿ-
ಇನ್‌ಫೋಸಿಸ್‌ಸ್ಪ್ರಿಂಗ್‌ಬೋರ್ಡ್‌ಕಾರ್ಯಕ್ರಮದಡಿ ಪತ್ರಕರ್ತರಿಗೆ ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದರಲ್ಲಿ ಡಿಜಿಟಲ್‌ಮಾಧ್ಯಮಕ್ಕೆ ಅಗತ್ಯ ಕೌಶಲ್ಯಗಳು
, ಕೃತಕ ಬುದ್ಧಿಮತ್ತೆಯ ಬಳಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.

ಈ ವರ್ಷದಲ್ಲಿ ಒಟ್ಟು ಮೂರು ಕಾರ್ಯಕ್ರಮಗಳ ಮೂಲಕ ಒಟ್ಟು 150 ಪತ್ರಕರ್ತರಿಗೆ ತರಬೇತಿ ನೀಡಲು ಉದ್ದೇಶಿಸಿದೆ. ಇದರಲ್ಲಿ ವಿಶೇಷವಾಗಿ ಒಂದು ಬ್ಯಾಚ್‌ನಲ್ಲಿ ಮಹಿಳಾ ಆಯವ್ಯಯದಡಿ ಪತ್ರಕರ್ತೆಯರಿಗೆ ತರಬೇತಿ ನೀಡಲು ಉದ್ದೇಶಿಸಿದೆ.

ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಈ ತರಬೇತಿಯಲ್ಲಿ ಆದ್ಯತೆ ನೀಡಲಾಗುವುದು. ಇನ್ಫೋಸಿಸ್ ಸಂಸ್ಥೆಯು ಪ್ಲಾಟ್‌ಫಾರ್ಮ್ ಮತ್ತು ಪರಿಣತಿ ಒದಗಿಸಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರು ಹಾಗೂ ಶಿಕ್ಷಕರ ಭಾಗವಹಿಸುವಿಕೆ ಸಮನ್ವಯಗೊಳಿಸಲಿದೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವಾಗಿದೆ. ಹೆಚ್ಚು ಪತ್ರಕರ್ತರಿಗೆ ತರಬೇತಿ ನೀಡುವ ಆಶಯದೊಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಮುಂದಡಿಯಿಟ್ಟಿದೆ.

ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ, ಸದಸ್ಯ ಹೆಚ್.ವಿ. ಕಿರಣ್‌ಇನ್‌ಫೋಸಿಸ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸತೀಶ ಬಿ. ನಂಜಪ್ಪ, ಹಿರಿಯ ಅಧಿಕಾರಿಗಳಾದ ಸಂತೋಷ್‌ಅನಂತಪುರ, ಬಿಳಿಗಿರಿ ರಂಗ ಮೊದಲಾದವರು ಉಪಸ್ಥಿತರಿದ್ದರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ