Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಶೋಷಿತ ಸಮುದಾಯಗಳಿಗೆ ಅನ್ಯಾಯ- ವಿ.ಎಸ್.ಉಗ್ರಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶತ ಶತಮಾನಗಳಿಂದಲೂ ಶೋಷಣೆಗೆ ಗುರಿಯಾಗಿರುವ ಪರಿಶಿಷ್ಟ ಜಾತಿ
, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ಯಾಯ ಮಾಡುತ್ತಿವುದರಿಂದ ಹಕ್ಕುಗಳ ರಕ್ಷಣೆಗಾಗಿ ಜಾಗೃತರಾಗುವಂತೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಎಚ್ಚರಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಂಟು ಜಿಲ್ಲೆಗಳಲ್ಲಿ ಈಗಾಗಲೆ ಪ್ರವಾಸ ಮಾಡಿದ್ದೇನೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಮೀಸಲಾತಿ ಹಕ್ಕು ನೀಡಿದ್ದಾರೆ. ಭಿಕ್ಷೆಯಲ್ಲ. ಸಾಮಾಜಿಕ, ಶೈಕ್ಷಣಿಕವಾಗಿ ಮುಂದುವರೆದಿರುವ ಜನಾಂಗಕ್ಕೆ ದೇಶದ ಪ್ರಧಾನಿ ಮೋದಿ ತರಾತುರಿಯಲ್ಲಿ ಶೇ. ೧೦ ರಷ್ಟು ಮೀಸಲಾತಿ ನೀಡಿದರು. ರಾಜ್ಯದಲ್ಲಿ ಐವತ್ತು ಲಕ್ಷದಷ್ಟು ನಾಯಕ ಸಮಾಜದವರಿದ್ದಾರೆ. ಒಂದು ಕೋಟಿ ಇಪ್ಪತ್ತೈದು ಲಕ್ಷ ಪರಿಶಿಷ್ಟ ಜಾತಿಯವರಿದ್ದಾರೆ. ಎರಡು ಕಾಲು ಕೋಟಿ ಓ.ಬಿ.ಸಿ.ಗಳಿದ್ದಾರೆ. ಕುಲಶಾಸ್ತ್ರ ಅಧ್ಯಯನ ಪ್ರಕಾರ ಯಾರ್‍ಯಾರೂ ಅರ್ಹರಿದ್ದಾರೋ ಅವರನ್ನೆಲ್ಲಾ ಪರಿಶಿಷ್ಟ ವರ್ಗಕ್ಕೆ ಸೇರಿಸಲಿ ನಮ್ಮದೇನು ಅಭ್ಯಂತರವಿಲ್ಲ ಎಂದರು.

ರಾಜಕಾರಣಿಗಳು ಶೋಷಿತರನ್ನು ಮತ ಬ್ಯಾಂಕಾಗಿ ಮಾಡಿಕೊಂಡು ಚೆಲ್ಲಾಟವಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮೀಸಲಾತಿ ಶೇ.೫೦ ಕ್ಕಿ ಜಾಸ್ತಿಯಾಗಬಾರದೆಂದು ಸೂಚಿಸಿದೆ.

ತಮಿಳುನಾಡಿನಲ್ಲಿ ಶೇ.೬೯ ರಷ್ಟು ಮೀಸಲಾತಿ ಜಾರಿಯಲ್ಲಿದೆ. ರಾಜ್ಯ ಸರ್ಕಾರ ೨೩-೧೦-೨೦೨೨ ರಂದು ಜಸ್ಟಿಸ್ ನಾಗಮೋಹನ್‌ದಾಸ್ ವರದಿ ಮೇಲೆ ಕಾನೂನು ಮಾಡಿರುವುದರಿಂದ ಶೋಷಿತ ಸಮುದಾಯಗಳಿಗೆ ನ್ಯಾಯ ಸಿಗುವುದಿಲ್ಲ. ಹಿಂದುಗಳು ನಾವೆಲ್ಲಾ ಒಂದು ಎಂದು ಹೇಳಿಕೊಳ್ಳುತ್ತಿರುವ ಪ್ರಧಾನಿ ಮೋದಿರವರು ಈ ಸಮಾಜಗಳಿಗೆ ಏಕೆ ನ್ಯಾಯ ಕೊಡುತ್ತಿಲ್ಲವೆಂದು ಪ್ರಶ್ನಿಸಿದರು?

ಆಲ್ ಪಾರ್ಟಿ ಶೆಡ್ಯೂಲ್ ಮೋದಿ ಬಳಿ ಹೋಗಿ ಮನವಿ ಮಾಡಿದ್ದೇವೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಿಗಧಿತ ಗಡುವಿನಲ್ಲಿ ಪ್ರಧಾನಿ ಮೋದಿ ಬಳಿ ನಿಯೋಗ ಹೋಗಿ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲಿ. ಇನ್ನು ನಮ್ಮ ತಾಳ್ಮೆಯನ್ನು ಕೆಣಕಿದರೆ ಸುಮ್ಮನಿರಲ್ಲ. ಎಂ.ಆರ್.ನಾಯಕ ಹಿಂದುಳಿದ ವರ್ಗಗಳ

ಆಯೋಗದ ವರದಿಯನ್ನು ಬಹಿರಂಗಪಡಿಸಿ ಎಸ್ಸಿಪಿ. ಟಿಎಸ್ಪಿ. ಹಣ ೪ ಲಕ್ಷ ೪೦ ಸಾವಿರ ಕೋಟಿ ಬಜೆಟ್‌ನಲ್ಲಿ ಪರಿಶಿಷ್ಟ ವರ್ಗಕ್ಕೆ ಏಳು ಪರ್ಸೆಂಟ್ ಎಸ್ಟಿ.ಗಳಿಗೆ, ಹದಿನಾಲ್ಕು ಸಾವಿರ ಕೋಟಿ ರೂ. ಪರಿಶಿಷ್ಟ ಜಾತಿಗೆ, ೩೫ ಸಾವಿರ ಕೋಟಿ ರೂ. ಹಿಂದುಳಿದ ವರ್ಗಗಳಿಗೆ ನೀಡಬೇಕು. ಎಸ್ಸಿ. ಎಸ್ಟಿ.ಗಳ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು. ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಮುಂದಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮಠಗಳಿಗೆ ಪ್ರತಿ ವರ್ಷ ಐದು ಕೋಟಿ ರೂ.ಅನುದಾನ ನೀಡುವಂತೆ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.

ನಮ್ಮ ಸಮುದಾಯದಿಂದ ಗೆದ್ದು ಹೋಗಿರುವ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರುಗಳು ಏಕೆ ಮಾತನಾಡುತ್ತಿಲ್ಲ. ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ೧೮೭ ಕೋಟಿ ರೂ.ಅವ್ಯವಹಾರವಾಗಿದೆ. ಕೆಡುಕುಂಟು ಮಾಡುವವರ ವಿರುದ್ದ ಈಗಾಲಾದರೂ ಧ್ವನಿ ಎತ್ತದಿದ್ದರೆ ರಾಜ್ಯಾದ್ಯಂತ ಹೋರಾಡುತ್ತೇವೆಂದು ಎಚ್ಚರಿಸಿದರು.

ಕೆ.ಪಿ.ಸಂಪತ್‌ಕುಮಾರ್, ನರಸಿಂಹಯ್ಯ, ರಾಜಣ್ಣ, ವೇಣುಗೋಪಾಲನಾಯಕ, ಆನಂದ, ಡಾ.ಮಂಜುಳ, ಜಯಶ್ರಿಗುಡ್ಡೆಕಾಯಿ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ