ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಒಳಮೀಸಲಾತಿ ಹೋರಾಟಗಾರರಾದ ಕೆ. ಗುರುಶ್ಯಾಮಯ್ಯ ಮಾದಿಗ (60) ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.
ಅಂತಿಮ ನಮನಗಳು- ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 05-10-2026ರ ಸೋಮವಾರ ಬೆಳಿಗ್ಗೆ 10:00 ಗಂಟೆಗೆ ಬಬ್ಬೂರು ಗ್ರಾಮದ ಅವರ ಜಮೀನಿನಲ್ಲಿ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾದಿಗ ದಂಡೋರ ಹೋರಾಟ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರೆ ಜನಪರ ಹೋರಾಟಗಾರರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.




