Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನರ್‌ವೀಲ್ಹ್ ಕ್ಲಬ್ ಅಧ್ಯಕ್ಷೆ ವೀಣಾ, ಕಾರ್ಯದರ್ಶಿ ಶೋಭ ಪದಗ್ರಹಣ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಇನ್ನರ್‌ವೀಲ್ಹ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷರಾಗಿ ವೀಣ ಜಯರಾಂ
, ಕಾರ್ಯದರ್ಶಿಯಾಗಿ ಶೋಭ ರಾಮಚಂದ್ರ ಇವರುಗಳ ಪದಗ್ರಹಣ ದವಳಗಿರಿ ಬಡಾವಣೆಯಲ್ಲಿರುವ ಗಾಯತ್ರಿ ಶಿವರಾಂ ಇನ್ನರ್‌ವೀಲ್ಹ್ ಭವನದಲ್ಲಿ ಭಾನುವಾರ ನಡೆಯಿತು.

ಪದಗ್ರಹಣ ಸ್ವೀಕರಿಸಿ ಮಾತನಾಡಿದ ಇನ್ನರ್‌ವೀಲ್ಹ್ ಕ್ಲಬ್ ಚಿತ್ರದುರ್ಗ ಅಧ್ಯಕ್ಷೆ ವೀಣ ಜಯರಾಂ ನಾಲ್ಕು ವರ್ಷಗಳ ಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ಫಲವಾಗಿ ಇನ್ನರ್‌ವೀಲ್ಹ್ ಕ್ಲಬ್ ಅಧ್ಯಕ್ಷ ಸ್ಥಾನ ಸಿಕ್ಕಿದೆ. ನನ್ನ ಅಧಿಕಾರವಧಿಯಲ್ಲಿ ಹಿರಿಯ ನಾಗರೀಕರು ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು.

ಸರ್ಕಾರಿ ಶಾಲೆಗಳ ಬಲವರ್ಧನೆ ಜೊತೆಗೆ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇಪ್ಪತ್ತಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಿದ್ದೇನೆ. ಇದರಿಂದ ಸ್ವಾವಲಂಭಿಗಳಾಗಿ ಬದುಕಲು ಸಹಕಾರಿಯಾಗಿದೆ ಇನ್ನರ್‌ವೀಲ್ಹ್ ಕ್ಲಬ್ ೧೦೨ ವರ್ಷಗಳನ್ನು ಪೂರೈಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೀಣಾ ಸ್ವಾಮಿ ಪದಗ್ರಹಣ ನೆರವೇರಿಸಿದರು. ಜ್ಯೋತಿ ಲಕ್ಷ್ಮಣ್ ಬುಲೆಟಿನ್ ಬಿಡುಗಡೆಗೊಳಿಸಿದರು. ಭಾಗ್ಯಲಕ್ಷ್ಮಿ, ವನಜಾ ಅನಂತರಾಜ್, ಪೂಜಾ ಪ್ರದೀಪ್ ಇವರುಗಳು ವೇದಿಕೆಯಲ್ಲಿದ್ದರು.

ರೂಪ ಜನಾರ್ಧನ್, ಪಾಸ್ಟ್ ಪ್ರೆಸಿಡೆಂಟ್ ಮೋಕ್ಷರುದ್ರಸ್ವಾಮಿ, ಗಾಯತ್ರಿ ಶಿವರಾಂ, ಮಾಧುರಿ ಮಧುಪ್ರಸಾದ್, ಶ್ಯಾಮಲ ಶಿವಪ್ರಕಾಶ್ ಇನ್ನು ಅನೇಕರು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ