Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪ ಲೋಕಾಯುಕ್ತರ ಕಾರ್ಯ ವ್ಯಾಪ್ತಿಗೆ ಒಳಪಡುವಂತಹವು) ಪ್ರಕರಣಗಳಲ್ಲಿ ತನಿಖೆ, ವಿಚಾರಣೆಗೆ ಬಾಕಿ ಇರುವವುಗಳನ್ನು ದೂರುದಾರರು ಹಾಗೂ

ಎದುರುದಾರರ ಸಮ್ಮುಖದಲ್ಲಿ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೆಪ್ಟೆಂಬರ್ ೨೫ ರಂದು ಗೌರವಾನ್ವಿತ ನ್ಯಾಯಮೂರ್ತಿ ಉಪಲೋಕಾಯುಕ್ತರಾದ  ಕೆ.ಎನ್.ಫಣೀಂದ್ರ ಅವರು ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಿದ್ದಾರೆ.

ಸೆಪ್ಟೆಂಬರ್-೨೪ ರಿಂದ ೨೬ರವರೆಗೆ ಜಿಲ್ಲೆಯಲ್ಲಿ ಉಪಲೋಕಾಯುಕ್ತರು ಪ್ರವಾಸ ಕೈಗೊಂಡಿರುವ ಸಂದರ್ಭ ೨೪ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೩೦ ರವರೆಗೆ ಹಾಗೂ ಮಧ್ಯಾಹ್ನ ೨.೩೦ ರಿಂದ ಸಂಜೆ ೫ ಗಂಟೆಯವರೆಗೆ ಕುವೆಂಪು ಕಲಾಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಹಾಗೂ ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳು,

ನೌಕರರು ನ್ಯಾಯಯುತವಾಗಿ ನಡೆಸಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ರೀತಿಯ ದುರಾಡಳಿತದಲ್ಲಿ ತೊಡಗಿದ್ದರೆ, ಅಂಥ ಪ್ರಕರಣಗಳಲ್ಲಿ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ ೧ ಮತ್ತು ೨ ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದು. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ