Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್. ಖರತ್ ರವರಿಗೆ ಡಿಜಿ-ಐಜಿಪಿ ಪದಕ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ
2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್ ಆಯ್ಕೆಯಾಗಿದ್ದಾರೆ.

ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು 200 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ಪ್ರಶಂಸನಾ ಪದಕವನ್ನು ಘೋಷಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ. ಸಲೀಂ ಸೋಮವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಲ್ಲಪ್ಪ ಎಸ್. ಖರತ್ ಅವರು ತಮ್ಮ ಸೇವಾ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳ ಪತ್ತೆಯಲ್ಲಿ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಲ್ಲಪ್ಪ ಎಸ್. ಖರತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಗೌರವದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಮತ್ತಷ್ಟು ಹೆಮ್ಮೆ ತಂದಂತಾಗಿದೆ.

ಇನ್ಸ್ ಪೆಕ್ಟರ್ ಕಲ್ಲಪ್ಪ ಎಸ್. ಖರತ್ ಮಾತನಾಡಿ, ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸ ತಂದಿದೆ. ಜವಾಬ್ದಾರಿ‌ಇನ್ನಷ್ಟು ಹೆಚ್ಚಾಗಿದೆ‌. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವಿರತವಾಗಿ ಶ್ರಮಿಸಲಾಗುವುದು ಎಂದು ಹೇಳಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನ್ಮದಿನಾಚರಣೆಗಳು ದುಂದು ವೆಚ್ಚದ ತೋರಿಕೆಯ ಆಚರಣೆಗಳಾಗಬಾರದು- ಚಂದ್ರಮೋಹನ್ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್. ಖರತ್ ರವರಿಗೆ ಡಿಜಿ-ಐಜಿಪಿ ಪದಕಕಂಠಪೂರ್ತಿ ಕುಡಿದು ರಸ್ತೆಯಲ್ಲಿ ದಾವಣಗೆರೆ ಯುವತಿ ಹೈಡ್ರಾಮಾ; ಪ್ರಶ್ನಿಸಿದ ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು ದರ್ಪ!ಸಚಿವ ಜಾರಕಿಹೊಳಿ ಬಾಮೈದನ ನಿವಾಸದ ಮೇಲೆ ಇಡಿ ದಾಳಿ; 13 ಕೋಟಿ ಆಸ್ತಿ, ನೂರಾರು ಬೇನಾಮಿ ಬಾರ್ ಲೈಸೆನ್ಸ್ ಪತ್ತೆ!ತ್ರಿವಳಿ ಕೊಲೆ: ಹಂತಕಿ ಶ್ವೇತಾ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಪ್ರಿಯಕರ ಕೆನ್ನೆತ್ ಬಂಧನ!ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಜನರ ವಿರುದ್ಧ FIR ದಾಖಲಿಸಿದ SITಡಿಕೆಶಿ ಜೊತೆ ಯಾವುದೇ ವ್ಯವಹಾರವಿಲ್ಲ, ಹೊಂದಾಣಿಕೆಯೂ ಇಲ್ಲ; ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ!ಮೆಟ್ರೋ ಬಾಗಿಲು ಲಾಕ್ ಆಗದಿರಲು ತಾಂತ್ರಿಕ ದೋಷವಲ್ಲ, ಪ್ರಯಾಣಿಕರ ಸರ ಕಾರಣ! ಅಸಲಿ ಸತ್ಯ ಬಿಚ್ಚಿಟ್ಟ ಬಿಎಂಆರ್‌ಸಿಎಲ್ನಟಿ ಕೃಷಿ ತಾಪಂಡ ಫ್ಲ್ಯಾಟ್‌ಬೆಡ್‌ರೂಮ್‌ನಲ್ಲಿ ಗೆಳೆಯ ಆತ್ಮಹತ್ಯೆ; ಪೊಲೀಸರ ಮುಂದೆ ನಟಿ ಬಿಚ್ಚಿಟ್ಟ ಸತ್ಯ ಇಲ್ಲಿದೆ!ಪ್ರದೀಪ್ ಈಶ್ವರ್‌ಆರೋಪಕ್ಕೆ ಕೈಯಲ್ಲಿದ್ದ HMT ವಾಚ್ ತೋರಿಸಿ ಕುಮಾರಸ್ವಾಮಿ ಟಾಂಗ್!