ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಲಸಂಪನ್ಮೂಲ ನಿರ್ವಹಣೆಗೆ ಹೊಸ ಹೆಜ್ಜೆ, ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಕೆ ಮಾಡಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್‌ಗಳನ್ನು ಬದಲಾಯಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಜೂನ್ 2026ರ ವೇಳೆಗೆ ಪೂರ್ಣಗೊಳ್ಳಲಿದೆ. ಹೊಸ ಗೇಟ್‌ಗಳು ಅಳವಡಿಕೆಯಾದ ನಂತರ, ಜಲಾಶಯದ ಸಂಪೂರ್ಣ ಸಾಮರ್ಥ್ಯದಲ್ಲಿ ನೀರನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ.
ಇದರಿಂದ ಲಕ್ಷಾಂತರ ರೈತರಿಗೆ ಮತ್ತು ಕುಡಿಯುವ ನೀರಿನ ಅಗತ್ಯತೆಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತದೆ. ಜಲಸಂಪನ್ಮೂಲ ಮತ್ತು ರೈತರ ಹಿತ ಕಾಪಾಡುವುದು ನಮ್ಮ ಬದ್ಧತೆ ಎಂದು ಶಿವಕುಮಾರ್ ತಿಳಿಸಿದ್ದಾರೆ.


